Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:22 - ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ವ್ಯಥೆಗೊಳಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದರಿಂದಲೂ ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “‘ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನು ಬರಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವು ಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನ್ನು ತೊರೆದುಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:22
23 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ’


“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.


ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.


“ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು, ನ್ಯಾಯವನ್ನೂ, ನೀತಿಯನ್ನೂ ನಡೆಸಿದರೆ, ಅವನು ಸಾಯದೆ ಖಂಡಿತವಾಗಿ ಬದುಕುವನು.


ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’ ” ಎಂದನು.


ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.


ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ.


ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, ‘ಸಮಾಧಾನ, ಸಮಾಧಾನ,’ ಎಂದು ಹೇಳುತ್ತಾರೆ.


ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


“ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸಬೇಕಾದದ್ದೇನೆಂದರೆ, ‘ಯೆಹೋವ ದೇವರು ನೆಹೆಲಾಮ್ಯನಾದ ಶೆಮಾಯನ ವಿಷಯವಾಗಿ ಹೀಗೆ ಹೇಳುತ್ತಾರೆ. ಶೆಮಾಯನು, ನಾನು ಅವನನ್ನು ಕಳುಹಿಸದೆ ಇರುವಾಗ, ನಿಮಗೆ ಪ್ರವಾದಿಸಿ, ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಇಡಮಾಡಿದ ಕಾರಣ,


ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.


ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”


ಒಬ್ಬ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ, ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು