Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:23 - ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ನೀವು ಇನ್ನು ಮೇಲೆ ಸುಳ್ಳು ದರ್ಶನಗಳನ್ನು ಕಾಣುವುದಿಲ್ಲ ಮತ್ತು ಸುಳ್ಳು ದೈವೋಕ್ತಿಗಳನ್ನು ಅಭ್ಯಾಸಿಸುವುದಿಲ್ಲ. ಏಕೆಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ಬಿಡಿಸುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ನೀವು ಪ್ರಯೋಜನವಿಲ್ಲದ ದರ್ಶನವನ್ನು ಇನ್ನು ಮೇಲೆ ನೋಡುವುದಿಲ್ಲ. ನೀವು ನಿಮ್ಮ ಮಂತ್ರತಂತ್ರಗಳನ್ನು ಇನ್ನು ಮಾಡುವುದಿಲ್ಲ. ನನ್ನ ಶಕ್ತಿಯಿಂದ ನಾನು ನನ್ನ ಜನರನ್ನು ಕಾಪಾಡುತ್ತೇನೆ. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:23
20 ತಿಳಿವುಗಳ ಹೋಲಿಕೆ  

ನಿಮ್ಮ ವಸ್ತ್ರಗಳನ್ನು ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ. ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.


‘ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ಸುಳ್ಳು ದರ್ಶನವೂ, ಮೋಸದ ಶಕುನವೂ ಇರುವುದಿಲ್ಲ.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.


ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು,


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಕೊಡಲಾಯಿತು. ನಲವತ್ತೆರಡು ತಿಂಗಳುಗಳವರೆಗೆ ಕಾರ್ಯಸಾಧಿಸುವ ಅಧಿಕಾರವನ್ನೂ ಅದಕ್ಕೆ ಕೊಡಲಾಯಿತು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ಆದರೆ ಇವರು ಇನ್ನು ಮುಂದುವರಿಯಲಾರರು. ಯನ್ನ, ಯಂಬ್ರರ ಮೂರ್ಖತನವು ಎಲ್ಲರಿಗೂ ಸ್ಪಷ್ಟವಾಗಿ ತಿಳಿದುಬಂದಂತೆಯೇ, ಇವರದೂ ತಿಳಿದುಬರುವುದು.


ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.


ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.”


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು