Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:10 - ಕನ್ನಡ ಸಮಕಾಲಿಕ ಅನುವಾದ

10 ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆ ಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹೀಗೆ, ಸಲಹೆ ಕೇಳಲು ಬಂದ ಮನುಷ್ಯನೂ ಅವನಿಗೆ ಉತ್ತರಕೊಟ್ಟ ಪ್ರವಾದಿಯೂ ಒಂದೇ ಶಿಕ್ಷೆಯನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:10
17 ತಿಳಿವುಗಳ ಹೋಲಿಕೆ  

ನಿಮ್ಮ ದುಷ್ಕರ್ಮದ ಫಲವನ್ನು ನೀವೇ ಅನುಭವಿಸುವಂತೆ ಮಾಡುವೆ. ನೀವು ನಿಮ್ಮ ವಿಗ್ರಹಗಳ ಆರಾಧನೆಯಿಂದಾದ ಪಾಪಗಳನ್ನು ಹೊರುವಿರಿ. ಆಗ ಸಾರ್ವಭೌಮ ಯೆಹೋವ ದೇವರು ನಾನೇ ಎಂದು ತಿಳಿದುಕೊಳ್ಳುವಿರಿ.”


ಏಕೆಂದರೆ ಪ್ರತಿಯೊಬ್ಬನೂ ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳಬೇಕು.


ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಅವರು ನನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡೆಸುವ ತನಕ ಅವರ ಕೋಪವನ್ನು ತಾಳುವೆನು. ಆತನು ನನ್ನನ್ನು ಬೆಳಕಿಗೆ ತರುವನು. ಆತನ ನೀತಿಯನ್ನು ನೋಡುವೆನು.


ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು.


ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.


ಆಗ ಗಂಡನು ನಿರಪರಾಧಿಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’ ”


ಆಗ ಕಾಯಿನನು ಯೆಹೋವ ದೇವರಿಗೆ, “ನನ್ನ ಶಿಕ್ಷೆಯು ತಾಳಲಾರದಷ್ಟು ದೊಡ್ಡದಾಗಿದೆ.


“ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.


ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು