Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:13 - ಕನ್ನಡ ಸಮಕಾಲಿಕ ಅನುವಾದ

13 “ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನರಪುತ್ರನೇ, ಅಪರಾಧವನ್ನು ನಡಿಸಿ ನನಗೆ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ ಅದರ ಜೀವನಾಧಾರವನ್ನು ತೆಗೆದುಬಿಟ್ಟು ಕ್ಷಾಮವನ್ನು ಬರಮಾಡಿ ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:13
26 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.


ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?


“ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,


“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,


ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು. ನಿನ್ನ ಮೇಲೆ ಭಯಂಕರವಾದ ಕ್ಷಾಮವನ್ನು ಬರಮಾಡಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.


‘ಜನಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ,’ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು.


ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ, ಗಾಳಿಗೆ ಸಿಕ್ಕಿದ ಗುಡಿಸಲಿನ ಹಾಗೆ ತೂಗಾಡುತ್ತದೆ, ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ, ಅದು ಬಿದ್ದು ಹೋಗುತ್ತದೆ, ತಿರುಗಿ ಏಳುವುದೇ ಇಲ್ಲ.


ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.


ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.


“ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡಿ ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನಗೆ ವಿರುದ್ಧವಾಗಿ ಬಹಳ ಅಪರಾಧಮಾಡಿದ್ದರಲ್ಲಿಯೂ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.


ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.


ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.


ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.


ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ಇದಲ್ಲದೆ ಯೆಹೋವ ದೇವರು, “ನಾನು ಸೃಷ್ಟಿಸಿದ ಮನುಷ್ಯನಿಂದ ಹಿಡಿದು, ಸಕಲ ಪ್ರಾಣಿ, ಆಕಾಶದ ಪಕ್ಷಿಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನು, ಭೂಮಿಯ ಮೇಲಿನಿಂದ ಎಲ್ಲವನ್ನು ನಾಶಮಾಡುವೆನು. ನಾನು ಅವರನ್ನು ಉಂಟುಮಾಡಿದ್ದಕ್ಕೆ ದುಃಖಪಡುತ್ತೇನೆ,” ಎಂದರು.


ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ.


ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.


ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’ ”


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು