Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:19 - ಕನ್ನಡ ಸಮಕಾಲಿಕ ಅನುವಾದ

19 “ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನಾನು ಆ ನಾಡಿನ ಮೇಲೆ ಕೋಪಕಾರಿ, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನ ಜಾನುವಾರುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು ರಕ್ತವನ್ನು ಸುರಿಸಿ ವ್ಯಾಧಿಯನ್ನು ಕಳುಹಿಸಿ ಜನಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನ್ನು ಬರಮಾಡಿದರೆ, ಅಥವಾ ನನ್ನ ಕೋಪವನ್ನು ಸುರಿದು ಜನರನ್ನು ಕೊಂದುಹಾಕಿದರೆ ಮತ್ತು ಪ್ರಾಣಿಗಳನ್ನು ನಾಶಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:19
29 ತಿಳಿವುಗಳ ಹೋಲಿಕೆ  

ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.


ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ, ನಿಮ್ಮ ಯೌವನಸ್ಥರನ್ನೂ ಖಡ್ಗದಿಂದ ಕೊಂದು ಹಾಕಿದ್ದೇನೆ. ನಿಮ್ಮ ಪಾಳೆಯಗಳ ದುರ್ವಾಸನೆಯು ನಿಮ್ಮ ಮೂಗು ಸಹಿಸದ ಹಾಗೆ ಮಾಡಿದ್ದೇನೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷವನ್ನು ಅವರ ಮೇಲೆ ಸುರಿಸಿದೆನು.


ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”


ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ಈ ಪಟ್ಟಣದ ನಿವಾಸಿಗಳನ್ನೂ, ಮನುಷ್ಯರನ್ನೂ, ಮೃಗಗಳನ್ನೂ ಸಹಿತವಾಗಿ ಹೊಡೆಯುವೆನು. ಅವರು ದೊಡ್ಡ ವ್ಯಾಧಿಯಿಂದ ಸಾಯುವರು.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ. ಮಧ್ಯಾಹ್ನದಲ್ಲಿ ಹಾಳುಮಾಡುವ ವ್ಯಾಧಿಗೂ ನೀನು ಭಯಪಡದಿರುವೆ.


ನಿಶ್ಚಯವಾಗಿ ದೇವರು ನಿಮ್ಮನ್ನು ಬೇಡನ ಉರುಲಿನಿಂದ ರಕ್ಷಿಸುವರು. ಮರಣಾಂತಿಕವಾದ ಸಾಂಕ್ರಾಮಿಕ ರೋಗದಿಂದಲೂ ಬಿಡಿಸುವರು.


‘ನಿಮ್ಮ ಹೆಸರು ಈ ಆಲಯದಲ್ಲಿರುವುದರಿಂದ ಖಡ್ಗವೂ ನ್ಯಾಯತೀರಿಸುವ ಶಿಕ್ಷೆಯೂ, ಘೋರವ್ಯಾಧಿಯೂ ಬರವೇನಾದರೂ ನಮ್ಮ ಮೇಲೆ ಬಂದರೆ, ನಾವು ಈ ಆಲಯದ ಮುಂದೆಯೂ, ನಿಮ್ಮ ಸಮ್ಮುಖದಲ್ಲಿಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿಮ್ಮನ್ನು ಕೂಗುವಾಗ, ನೀವು ಕೇಳಿ ರಕ್ಷಿಸುವಿರಿ,’ ಎಂದು ಹೇಳಲಿಲ್ಲವೇ?


“ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.


ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು.


ಅವರಲ್ಲಿ ಹತರಾದವರು, ಬೀದಿಪಾಲಾಗುವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತ ಪ್ರವಾಹದಿಂದ ಪರ್ವತಗಳು ತೋಯಿಸುವುದು.


ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?


ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು