ಯೆಹೆಜ್ಕೇಲನು 14:23 - ಕನ್ನಡ ಸಮಕಾಲಿಕ ಅನುವಾದ23 ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಯೆರೂಸಲೇವಿುಗೆ ಮಾಡಿದ್ದೆಲ್ಲಾ ಸುಮ್ಮನೆ ಮಾಡಿದ್ದಲ್ಲವೆಂದು ನಿಮಗೆ ತಿಳಿದುಬರುವದು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವರು ಜೀವಿಸುವ ರೀತಿ, ದುಷ್ಟತನವನ್ನು ನಡಿಸುವ ರೀತಿಯನ್ನು ನೀವು ನೋಡುವಿರಿ. ಆಗ ನಾನು ಯಾಕೆ ಅವರನ್ನು ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |