Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:6 - ಕನ್ನಡ ಸಮಕಾಲಿಕ ಅನುವಾದ

6 “ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಆದಕಾರಣ ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿರಿ; ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ಬೊಂಬೆಗಳನ್ನು ತೊರೆದುಬಿಟ್ಟು ಹಿಂದಿರುಗಿರಿ, ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಆದ್ದರಿಂದ ಇಸ್ರೇಲ್ ಜನರಿಗೆ ಈ ವಿಷಯವನ್ನು ತಿಳಿಸು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನ್ನು ತೊರೆದುಬಿಟ್ಟು ನನ್ನ ಬಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:6
29 ತಿಳಿವುಗಳ ಹೋಲಿಕೆ  

“ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”


ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”


ಏಕೆಂದರೆ ನಮ್ಮ ಪಿತೃಗಳು ಅಪನಂಬಿಗಸ್ತರಾಗಿ, ನಮ್ಮ ದೇವರಾದ ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ, ಅವರನ್ನು ಬಿಟ್ಟುಬಿಟ್ಟರು. ಇದಲ್ಲದೆ ಅವರು ಯೆಹೋವ ದೇವರ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ, ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.


ಅವರು ನನಗೆ, “ಮನುಷ್ಯಪುತ್ರನೇ, ಅವರು ಮಾಡುತ್ತಿರುವುದನ್ನು ನೋಡುತ್ತಿರುವೆಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವಹಾಗೆ, ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯಗಳನ್ನು ನೋಡುತ್ತಿರುವೆಯಾ? ಆದರೆ ನೀನು ಇನ್ನೂ ಹೆಚ್ಚಿನ ಅಸಹ್ಯಗಳನ್ನು ನೋಡುವೆ,” ಎಂದನು.


ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು