Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:4 - ಕನ್ನಡ ಸಮಕಾಲಿಕ ಅನುವಾದ

4 ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಲ್ಲ, ಬೆಂಕಿಗೆ ಹಾಕುತ್ತಾರೆ. ಸೌದೆಯಾಗಿ, ಅದನ್ನು ಬೆಂಕಿ ಸುಟ್ಟುಬಿಡುತ್ತದೆ. ಅದರ ಎರಡು ಕೊನೆಗಳೂ ಇದ್ದಲಾಗುತ್ತವೆ. ಅದರ ಮಧ್ಯಭಾಗವು ಬಾರದು ಯಾವ ತರದ ಬಳಕೆಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಹಾ, ಅದನ್ನು ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವದು, ಮಧ್ಯಭಾಗವು ಇದ್ದಲಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದು ಕೇವಲ ಬೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಬೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟುಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:4
13 ತಿಳಿವುಗಳ ಹೋಲಿಕೆ  

ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು.


ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.”


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”


ಇದರಿಂದ ಕಟ್ಟಿಗೆಯನ್ನು ತೆಗೆದುಕೊಂಡು ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವನನ್ನಾದರೂ ನೇತುಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?


ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ, ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟುಹೋದ ಮೇಲೆ ಯಾವ ಕೆಲಸಕ್ಕೆ ಬಂದೀತು?”


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು