ಯೆಹೆಜ್ಕೇಲನು 15:6 - ಕನ್ನಡ ಸಮಕಾಲಿಕ ಅನುವಾದ6 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಂತಿರಲು ಸರ್ವೇಶ್ವರನಾದ ದೇವರು ಹೇಳುವುದಿದು: “ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷವನ್ನೆ ಅಗ್ನಿಗೆ ನಾನು ಸೌದೆಯನ್ನಾಗಿಸಿರುವಂತೆ ಕೊಟ್ಟಿರುವೆನು ಜೆರುಸಲೇಮನ್ನು ವಿನಾಶಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವನವೃಕ್ಷಗಳಲ್ಲಿ ದ್ರಾಕ್ಷೆಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಕೊಟ್ಟಿದ್ದೇನೋ ಹಾಗೆಯೇ ನಾನು ಯೆರೂಸಲೇವಿುನವರನ್ನು [ನಾಶನಕ್ಕೆ] ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದ್ರಾಕ್ಷಿಬಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಬೆಂಕಿಗೆ ಬೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನ್ನು ನೇಮಿಸಿದ್ದೇನೆ. ಇದೇ ಕೆಲಸವನ್ನು ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’