Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:7 - ಕನ್ನಡ ಸಮಕಾಲಿಕ ಅನುವಾದ

7 ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರ ಮೇಲೆ ಕೋಪದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ ಬೆಂಕಿಯು ಅವರನ್ನು ನುಂಗಿಬಿಡುವದು; ನಾನು ಅವರ ಮೇಲೆ ಕೋಪದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:7
22 ತಿಳಿವುಗಳ ಹೋಲಿಕೆ  

ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.


ಆಗ ಭಯದ ಶಬ್ದಕ್ಕೆ ಓಡಿಹೋಗುವವನು ಗುಂಡಿಯೊಳಗೆ ಬೀಳುವನು. ಗುಂಡಿಯೊಳಗಿಂದ ಏರಿಬರುವವನು ಬಲೆಗೆ ಸಿಕ್ಕಿಬೀಳುವನು. ಆಕಾಶದ ದ್ವಾರಗಳು ತೆರೆದಿವೆ. ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.


ಆದರೆ ಕೆಟ್ಟದ್ದನ್ನು ಮಾಡುವವರಿಗೆ ಯೆಹೋವ ದೇವರು ವಿಮುಖರಾಗಿದ್ದಾರೆ, ಅಂಥವರ ಹೆಸರನ್ನು ಭೂಮಿಯೊಳಗಿಂದ ತೆಗೆದುಹಾಕುವರು.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’


ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.


ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳ ಪ್ರಕಾರವಲ್ಲ, ನಿಮ್ಮ ದುಷ್ಕೃತ್ಯಗಳ ಪ್ರಕಾರವಲ್ಲ, ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ.


ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


“ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ.


ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.


ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು