Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:10 - ಕನ್ನಡ ಸಮಕಾಲಿಕ ಅನುವಾದ

10 ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲು ಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರುಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ ಕಡಲುಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ ನಯವಾದ ನಾರುಮಡಿಯನ್ನು ನಿನಗೆ ಉಡಿಸಿ ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನಗೆ ಅಂದವಾದ ಉಡುಪನ್ನು ಕೊಟ್ಟು ಕಾಲಿಗೆ ನಯವಾದ ಚರ್ಮದ ಕೆರಗಳನ್ನು ಕೊಟ್ಟೆನು. ನಿನ್ನ ತಲೆಗೆ ನಾರುಮಡಿಯ ತಲೆಕಟ್ಟನ್ನು ಕೊಟ್ಟೆನು ಮತ್ತು ನಿನಗೆ ರೇಷ್ಮೆಯ ಬಟ್ಟೆಯನ್ನು ಹೊದಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:10
24 ತಿಳಿವುಗಳ ಹೋಲಿಕೆ  

ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು, ಅವರಿಗೆ ಹೊದಿಸಿ, ನನ್ನ ಎಣ್ಣೆಯನ್ನೂ, ಧೂಪವನ್ನೂ ಅವರ ಮುಂದೆ ಇಟ್ಟೆ.


ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


“ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಬೇಕು.


ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು. ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ.


“ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ.


“ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಅವರು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರವನ್ನು ಮತ್ತು ನಯವಾದ ನಾರುಬಟ್ಟೆಯನ್ನು ಹೊಸೆದು ಉಪಯೋಗಿಸಬೇಕು.


ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಬೇಕು, ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಬೇಕು.


ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ,


ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು ಮತ್ತು ಅದು ನಿನ್ನ ಧ್ವಜವಾಗಿತ್ತು. ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು.


ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.


ಹೊಲದಲ್ಲಿಯ ಮೊಳಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು, ನೀನು ಬಲಿತು, ಪ್ರಾಯವು ತುಂಬಿ, ನೀನು ಅತಿ ಸುಂದರಿಯಾದೆ, ನಿನ್ನ ಸ್ತನಗಳು ರೂಪಗೊಂಡವು, ನಿನ್ನ ಕೂದಲು ಬೆಳೆಯಿತು, ಮೊದಲು ನೀನು ಬರೀ ಬೆತ್ತಲೆಯಾಗಿದ್ದೆ.


ಆಕೆಯು ತಾನೇ ಕಂಬಳಿಗಳನ್ನು ನೇಯುತ್ತಾಳೆ. ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.


ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ.


ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ಆಕೆಯನ್ನು ತರುತ್ತಿದ್ದಾರೆ. ಹೀಗೆ ಅವರು ರಾಜಭವನದೊಳಗೆ ಪ್ರವೇಶಿಸುವರು.


ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು