ಯೆಹೆಜ್ಕೇಲನು 16:16 - ಕನ್ನಡ ಸಮಕಾಲಿಕ ಅನುವಾದ16 ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾ ಸ್ಥಳದಲ್ಲಿ ವ್ಯಭಿಚಾರ ಮಾಡಿದೆ; ನೀನು ಅವನ ಬಳಿಗೆ ಹೋದೆ ಮತ್ತು ಅವನು ನಿನ್ನ ಸೌಂದರ್ಯವನ್ನು ತೆಗೆದುಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರ ನಡಿಸಿದೆ. ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀನು ಪುಣ್ಯಕ್ಷೇತ್ರಗಳನ್ನು ನಿರ್ಮಿಸಿ, ನಿನ್ನ ನಾನಾ ಶೈಲಿಯ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ, ಹಿಂದೆಂದೂ ನಡೆಯದಂತಹ, ಮುಂದೆ ಎಂದೂ ನಡೆಯಬಾರದಂತಹ ವ್ಯಭಿಚಾರವನ್ನು ನಡೆಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ಪೂಜಾಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರನಡಿಸಿದಿ. (ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀನು ನಿನ್ನ ಬಟ್ಟೆಗಳಲ್ಲಿ ಕೆಲವನ್ನು ತೆಗೆದುಕೊಂಡು ನಿನ್ನ ಪೂಜಿಸುವ ಸ್ಥಳಗಳನ್ನು ವರ್ಣರಂಜಿತವನ್ನಾಗಿ ಮಾಡಿದೆ ಮತ್ತು ಆ ಸ್ಥಳಗಳಲ್ಲಿ ನೀನು ಸೂಳೆಯಂತೆ ವರ್ತಿಸಿದೆ. ಹಾದುಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ನಿನ್ನನ್ನು ಒಪ್ಪಿಸಿಕೊಟ್ಟೆ. ಅಧ್ಯಾಯವನ್ನು ನೋಡಿ |