Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:18 - ಕನ್ನಡ ಸಮಕಾಲಿಕ ಅನುವಾದ

18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು, ಅವರಿಗೆ ಹೊದಿಸಿ, ನನ್ನ ಎಣ್ಣೆಯನ್ನೂ, ಧೂಪವನ್ನೂ ಅವರ ಮುಂದೆ ಇಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿನ್ನ ಕಸೂತಿಯ ವಸ್ತ್ರಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳಿಗೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಂತರ ನೀನು ಅಂದವಾದ ಬಟ್ಟೆಯಿಂದ ಆ ವಿಗ್ರಹಗಳಿಗೆ ಹೊದಿಸಿದೆ. ನಾನು ನಿನಗೆ ಕೊಟ್ಟಿದ್ದ ಧೂಪ, ಪರಿಮಳದ್ರವ್ಯವನ್ನು ನೀನು ಆ ವಿಗ್ರಹಗಳ ಮುಂದೆ ಹಾಕಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:18
9 ತಿಳಿವುಗಳ ಹೋಲಿಕೆ  

ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು;


ಇದಲ್ಲದೆ ನಾನು ನಿನಗೆ ಬೆಳ್ಳಿಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದೆ.


ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ದೇವರುಗಳು ಎಲ್ಲಿ? ಈಗ ಆ ದೇವರುಗಳು ಎದ್ದು ನಿಮಗೆ ಸಹಾಯ ಮಾಡಲಿ, ನಿಮಗೋಸ್ಕರ ಕಾವಲಾಗಲಿ.


ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.


ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ನನ್ನ ಧೂಪವನ್ನು ನನ್ನ ಎಣ್ಣೆಯನ್ನು ಇಟ್ಟಿದ್ದ ಮೇಜನ್ನು ಸಿದ್ಧಮಾಡಿದೆ.


ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ. ಹುಡುಕಿದರೂ ಅವರು ಸಿಕ್ಕುವುದಿಲ್ಲ. ಆಗ ಅವಳು ಹೀಗೆ ಎಂದುಕೊಳ್ಳುವಳು, ‘ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು. ಏಕೆಂದರೆ ಆಗ ನನ್ನ ಸ್ಥಿತಿ ಪ್ರಸ್ತುತ ಸ್ಥಿತಿಗಿಂತ ಉತ್ತಮವಾಗಿತ್ತು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು