ಯೆಹೆಜ್ಕೇಲನು 16:19 - ಕನ್ನಡ ಸಮಕಾಲಿಕ ಅನುವಾದ19 ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು, ಇವುಗಳನ್ನೂ, ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ನಿನಗೆ ಕೇಡು! ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದಿ; ಅಯ್ಯೋ, ಹೀಗಾಯಿತಲ್ಲ! ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ನಿನಗೆ ರೊಟ್ಟಿ, ಜೇನು ಮತ್ತು ಎಣ್ಣೆಯನ್ನು ಕೊಟ್ಟಿದ್ದೆನು. ಆದರೆ ನೀನು ಆ ಆಹಾರವನ್ನು ಮೂರ್ತಿಗಳಿಗೆ ಕೊಟ್ಟೆ. ಆ ಸುಳ್ಳು ದೇವರುಗಳನ್ನು ಮೆಚ್ಚಿಸುವದಕ್ಕೋಸ್ಕರ ನೀನು ಅವುಗಳನ್ನು ಸುಗಂಧವಾಸನೆಯ ಕಾಣಿಕೆಯಂತೆ ಅರ್ಪಿಸಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು. ಅಧ್ಯಾಯವನ್ನು ನೋಡಿ |