Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:21 - ಕನ್ನಡ ಸಮಕಾಲಿಕ ಅನುವಾದ

21 ನೀನು ನನ್ನ ಮಕ್ಕಳನ್ನು ಕೊಂದು, ವಿಗ್ರಹಗಳಿಗೆ ಬಲಿಯಾಗಿ ಅರ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿನ್ನ ಈ ಸೂಳೆತನ ಅಲ್ಪಕಾರ್ಯವೆಂದು ಭಾವಿಸಿದೆಯೋ? ಅದನ್ನು ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ ಮೂರ್ತಿಗಳಿಗೆ ಆಹುತಿಯಾಗಿಟ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನ ಸೂಳೆತನವು ಅಲ್ಪಕಾರ್ಯವೆಂದು ಭಾವಿಸಿದಿಯೋ? ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ನನ್ನ ಗಂಡುಮಕ್ಕಳನ್ನು ಸಂಹರಿಸಿ ಬೆಂಕಿಯಲ್ಲಿ ದಾಟಿಸಿ ಆ ಸುಳ್ಳುದೇವರಿಗೆ ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:21
11 ತಿಳಿವುಗಳ ಹೋಲಿಕೆ  

ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.


ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.


ತಮ್ಮ ಗಂಡು ಮಕ್ಕಳನ್ನೂ, ಹೆಣ್ಣು ಮಕ್ಕಳನ್ನೂ ಸುಳ್ಳು ದೇವರುಗಳಿಗೆ ಬಲಿಕೊಟ್ಟರು.


ಯಾವನೂ ತನ್ನ ಮಗನನ್ನಾದರೂ, ಮಗಳನ್ನಾದರೂ ಮೋಲೆಕನಿಗೋಸ್ಕರ ಬೆಂಕಿಯಲ್ಲಿ ಬಲಿ ಅರ್ಪಿಸದಂತೆ ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತನ್ನು ಅಶುದ್ಧ ಮಾಡಿದನು.


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ತನ್ನ ಮಗನನ್ನು ಇಲ್ಲವೆ ಮಗಳನ್ನು ಆಹುತಿ ಕೊಡುವವನೂ, ಕಣಿ ಹೇಳುವವನೂ, ಶಕುನ ನೋಡುವವನೂ, ಸರ್ಪ ಮಂತ್ರದವನೂ, ಮಾಟಗಾರನೂ,


“ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.


“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು.


ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.


ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿದುಕೊಳ್ಳುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು