Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:24 - ಕನ್ನಡ ಸಮಕಾಲಿಕ ಅನುವಾದ

24 ನೀವು ನಿಮಗಾಗಿ ಒಂದು ದಿಬ್ಬವನ್ನು ನಿರ್ಮಿಸಿದ್ದೀರಿ ಮತ್ತು ಪ್ರತಿ ಸಾರ್ವಜನಿಕ ಚೌಕದಲ್ಲಿ ಎತ್ತರದ ದೇವಾಲಯವನ್ನು ನಿರ್ಮಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ದಿಬ್ಬವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನೀನು ಎಲ್ಲಾ ದುಷ್ಕೃತ್ಯಗಳನ್ನು ಮಾಡಿದ ನಂತರ ಸುಳ್ಳು ದೇವರುಗಳಿಗಾಗಿ ಎತ್ತರವಾದ ಸ್ಥಳಗಳಲ್ಲಿ ಹೆಚ್ಚು ಪೂಜಾಸ್ಥಳಗಳನ್ನು ಮಾಡಿದೆ. ಪ್ರತಿಯೊಂದು ರಸ್ತೆಯ ಚೌಕಗಳಲ್ಲಿ ಅನ್ಯದೇವರುಗಳಿಗಾಗಿ ಪೂಜಾಸ್ಥಳಗಳನ್ನು ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:24
19 ತಿಳಿವುಗಳ ಹೋಲಿಕೆ  

ಅನಂತರ ನಿನ್ನನ್ನು ಅವರ ಕೈಗಳಿಗೆ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ, ನಿನ್ನ ಉನ್ನತ ಸ್ಥಾನಗಳನ್ನು ಒಡೆದು ಬಿಡುವರು. ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಆಭರಣಗಳನ್ನು ಕಸಿದುಕೊಂಡು, ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿಹೋಗುವರು.


ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ, ದಿಬ್ಬವನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು, ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿ ನೀನಲ್ಲ.


“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.


ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀಯೆ, ಬಲಿಯನ್ನರ್ಪಿಸಲು ಆ ಬೆಟ್ಟವನ್ನೇರಿದ್ದೀ.


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


“ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು. ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಮರುಭೂಮಿಯಲ್ಲಿ ಅರಬೀಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ. ಹೀಗೆ ನಿನ್ನ ವೇಶ್ಯೆತನಗಳಿಂದಲೂ, ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.


ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.


ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿಕೊಂಡು, ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ, ಸುಳ್ಳಿನ ಸಂತತಿಯೂ ಅಲ್ಲವೋ?


ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು.


ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’


“ ‘ನಿನಗೆ ಕಷ್ಟ! ಕಷ್ಟ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅವನ ಎಲ್ಲಾ ದುಷ್ಟತನದ ಹೊರತಾಗಿ,


ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.


ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು