Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:28 - ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಅಸ್ಸೀರಿಯರೊಂದಿಗೂ ವ್ಯಭಿಚಾರ ಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀಯೆ; ಆದರೂ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಇಷ್ಟೂ ಸಾಲದೆಂದು ನೀನು ಅಸ್ಸೀರಿಯರೊಂದಿಗೂ ಹಾದರಮಾಡಿದೆ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮತ್ತು ಇಷ್ಟೂ ಸಾಲದೆಂದು ಅಶ್ಯೂರ್ಯರೊಂದಿಗೂ ಹಾದರಮಾಡಿದಿ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆ ಬಳಿಕ ನೀನು ಅಶ್ಶೂರದವರೊಂದಿಗೆ ಸಂಭೋಗಿಸಲು ಹೋದಿ. ನೀನು ತೃಪ್ತಿಗೊಳ್ಳುವಷ್ಟು ಆನಂದ ಸಿಗಲಿಲ್ಲ. ನೀನೆಂದೂ ತೃಪ್ತಿಗೊಂಡವಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:28
14 ತಿಳಿವುಗಳ ಹೋಲಿಕೆ  

ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನಿಗೆ, “ನಾನು ನಿನ್ನ ಸೇವಕನೂ, ನಿನ್ನ ಮಗನೂ ಆಗಿದ್ದೇನೆ. ನನಗೆ ವಿರೋಧವಾಗಿ ಎದ್ದ ಅರಾಮಿನ ಅರಸನ ಕೈಗೂ, ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ, ರಕ್ಷಿಸುವುದಕ್ಕೆ ಬರಬೇಕು,” ಎಂದು ಹೇಳಿ ಸೇವಕರನ್ನು ಕಳುಹಿಸಿದನು.


ಅದು ಸಹ, ಮಹಾರಾಜನಿಗೆ ಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು. ಎಫ್ರಾಯೀಮು ನಾಚಿಕೆಯನ್ನು ಹೊಂದುವುದು. ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ.


ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.


ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ?


ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.


ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.


“ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಕೆಟ್ಟವುಗಳಿಗಿಂತಲೂ ಅಸಹ್ಯವಾದವುಗಳನ್ನು ಮಾಡಿದ್ದರಿಂದಲೂ, ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಕ್ಕೆ ಪ್ರೇರೇಪಿಸಿದ್ದರಿಂದಲೂ,


ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.


“ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ, ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ, ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ, ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ? ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ. ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?” ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ವ್ಯಾಪಾರಸ್ಥರಾದ ಬಾಬಿಲೋನಿಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು