Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:34 - ಕನ್ನಡ ಸಮಕಾಲಿಕ ಅನುವಾದ

34 ಹೀಗಿರುವುದರಿಂದ ನಿನ್ನ ವ್ಯಭಿಚಾರವು ಇತರ ವೇಶ್ಯೆಯರ ವ್ಯಭಿಚಾರಕ್ಕಿಂತ ಭಿನ್ನ. ವ್ಯಭಿಚಾರ ಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ. ನೀನು ಬಹುಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವುದಿಲ್ಲ. ಆದ್ದರಿಂದ ನೀನು ಭಿನ್ನಳಾಗಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನಿನ್ನ ಸೂಳೆತನಕ್ಕೂ ಇತರ ವೇಶ್ಯೆಯರ ಸೂಳೆತನಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರ ಹೇಳತೀರದು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿನ್ನ ಸೂಳೆತನಕ್ಕೂ ಇತರ ವೇಶಿಗಳ ಸೂಳೆತನಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನೀನು ಸೂಳೆಯರಿಗೇ ವಿರುದ್ಧವಾಗಿ ನಡೆದಿರುವೆ. ಅವರು ಪುರುಷರಿಂದ ಹಣ ತೆಗೆದುಕೊಳ್ಳುವಾಗ ನೀನೇ ಅವರಿಗೆ ಹಣಕೊಟ್ಟಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:34
5 ತಿಳಿವುಗಳ ಹೋಲಿಕೆ  

ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.


ಸಾಮಾನ್ಯವಾಗಿ ವ್ಯಭಿಚಾರಿಗಳಿಗೆ ಬಹುಮಾನ ಕೊಡುತ್ತಾರೆ. ಆದರೆ ನೀನೇ ನಿನ್ನ ಪ್ರಿಯರಿಗೆಲ್ಲ ಬಹುಮಾನಗಳನ್ನು ಕೊಟ್ಟು, ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಲಂಚ ಕೊಡುತ್ತಿರುವೆ.


“ ‘ಆದಕಾರಣ ವ್ಯಭಿಚಾರಿಣಿಯೇ, ನೀನು ಯೆಹೋವ ದೇವರ ವಾಕ್ಯವನ್ನು ಕೇಳು.


ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಸ್ಸೀರಿಯಗೆ ಹೋಗಿದ್ದಾರೆ. ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ.


ಸ್ವಲ್ಪ ಸಮಯದ ನಂತರ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ, “ನನ್ನ ಸಂಗಡ ಮಲಗು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು