ಯೆಹೆಜ್ಕೇಲನು 16:39 - ಕನ್ನಡ ಸಮಕಾಲಿಕ ಅನುವಾದ39 ಅನಂತರ ನಿನ್ನನ್ನು ಅವರ ಕೈಗಳಿಗೆ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ, ನಿನ್ನ ಉನ್ನತ ಸ್ಥಾನಗಳನ್ನು ಒಡೆದು ಬಿಡುವರು. ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಆಭರಣಗಳನ್ನು ಕಸಿದುಕೊಂಡು, ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು, ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ದಿಬ್ಬವನ್ನು ಕೆಡವಿ ನಿನ್ನ ಜಗಲಿಗಳನ್ನು ಒಡೆದು ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆ ನಿನ್ನ ಪ್ರಿಯತಮರಿಗೆ ನಿನ್ನನ್ನು ಬಿಟ್ಟುಕೊಡುವೆನು. ಅವರು ನಿನ್ನ ದಿಬ್ಬಗಳನ್ನು ನಾಶಮಾಡುವರು ಮತ್ತು ಪೂಜಾಯಜ್ಞವೇದಿಕೆಗಳನ್ನು ಕೆಡವಿಹಾಕುವರು. ನಿನ್ನ ಬಟ್ಟೆಗಳನ್ನು ಕಿತ್ತುಕೊಳ್ಳುವರು ಮತ್ತು ಚಂದವಾದ ಆಭರಣಗಳನ್ನು ತೆಗೆದುಕೊಂಡು ಹೋಗುವರು. ಮತ್ತು ನಿನ್ನನ್ನು ಬೆತ್ತಲೆಯಾಗಿ ಮಾಡುವರು. ಅಧ್ಯಾಯವನ್ನು ನೋಡಿ |