Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:43 - ಕನ್ನಡ ಸಮಕಾಲಿಕ ಅನುವಾದ

43 “ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 “ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:43
22 ತಿಳಿವುಗಳ ಹೋಲಿಕೆ  

ಎಲ್ಲಾ ಅಸಹ್ಯ ಕಾರ್ಯಗಳನ್ನೂ, ವ್ಯಭಿಚಾರಗಳನ್ನೂ ಮಾಡುತ್ತಿದ್ದಾಗ, ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ, ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದುದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ದೇವರು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ತಾವು ತೋರಿಸಿದ ಶಕ್ತಿಯನ್ನೂ ಅವರು ಸ್ಮರಿಸಲಿಲ್ಲ.


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


“ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.


ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.


ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.


ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.


ನೀನು ನಿನ್ನ ದುಷ್ಕರ್ಮಗಳ ಮತ್ತು ನಿನ್ನ ಅಸಹ್ಯಗಳ ಫಲವನ್ನು ಅನುಭವಿಸಬೇಕಾಗಿ ಬಂತು, ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು.


ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.


ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು