Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:46 - ಕನ್ನಡ ಸಮಕಾಲಿಕ ಅನುವಾದ

46 ನಿನ್ನ ಉತ್ತರ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ. ದಕ್ಷಿಣ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 “ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನಿನ್ನೆಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನಿನ್ನ ಅಕ್ಕ ಸಮಾರ್ಯಳು. ಆಕೆಯು ನಿನ್ನ ಉತ್ತರ ದಿಕ್ಕಿನಲ್ಲಿ ತನ್ನ ಹೆಣ್ಣು ಮಕ್ಕಳೊಂದಿಗೆ (ಪಟ್ಟಣಗಳು) ವಾಸ ಮಾಡಿದ್ದಳು. ನಿನ್ನ ತಂಗಿಯು ಸೊದೋಮಳು. ಆಕೆ ನಿನ್ನ ದಕ್ಷಿಣದಲ್ಲಿ ತನ್ನ ಹೆಣ್ಣುಮಕ್ಕಳೊಂದಿಗೆ (ಪಟ್ಟಣಗಳು) ವಾಸಿಸಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:46
30 ತಿಳಿವುಗಳ ಹೋಲಿಕೆ  

ಅವರುಗಳ ಹೆಸರುಗಳೇನೆಂದರೆ ಒಹೊಲ ಎಂಬವಳು ದೊಡ್ಡವಳು. ಒಹೊಲೀಬ ಎಂಬವಳು ಚಿಕ್ಕವಳು. ಅವರು ನನ್ನವರಾಗಿದ್ದು ಪುತ್ರಪುತ್ರಿಯರನ್ನು ಹೆತ್ತರು; ಅವರ ಹೆಸರುಗಳಾದ ಒಹೊಲ ಎಂಬುದು ಸಮಾರ್ಯವು ಮತ್ತು ಒಹೊಲೀಬ ಎಂಬುದು ಯೆರೂಸಲೇಮು ಆಗಿದೆ.


ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು, ನಿನ್ನ ಸಹೋದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವೆ. ಅವರನ್ನು ನಿನ್ನ ಪುತ್ರಿಯರಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆಯಿಂದಲ್ಲ.


ಸಮಾರ್ಯವೆಂಬಾಕೆಯು ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದೆ. ನೀನು ಮಾಡಿದ ಲೆಕ್ಕವಿಲ್ಲದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಗಳು ಸಾಂಕೇತಿಕವಾಗಿ ಸೊದೋಮ್ ಹಾಗೂ ಈಜಿಪ್ಟ್ ಎಂದೂ ಹೆಸರುಗಳಿರುವುದು. ಇವರ ಒಡೆಯ ಆಗಿರುವವರನ್ನು ಸಹ ಅಲ್ಲಿಯೇ ಶಿಲುಬೆಗೆ ಹಾಕಲಾಗಿತ್ತು.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.


ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ?


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಮತ್ತು ಪ್ರಧಾನ ಭೂಮಿಯಲ್ಲಿರುವ ಅದರ ಪುತ್ರಿಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವ ದೇವರೆಂದು ಎಲ್ಲರಿಗೂ ತಿಳಿಯುವುದು.


“ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ, ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆಸಿದಳು.


ಆದ್ದರಿಂದ ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಭೂಪ್ರದೇಶವನ್ನು ಕಡಿಮೆ ಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು, ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಪುತ್ರಿಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.


ನನ್ನ ಜನರ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು. ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲಾಯಿತು ಮತ್ತು ಅವಳಿಗೆ ಸಹಾಯಮಾಡಲು ಯಾವ ಕೈಗಳೂ ಇರಲಿಲ್ಲ.


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. ಅವರ ಹಣ್ಣುಗಳು, ವಿಷದ ಹಣ್ಣುಗಳು, ಆ ಹಣ್ಣುಗಳ ಗೊಂಚಲು ಕಹಿಯಾಗಿವೆ.


ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.


ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಿಮಿನ ಅರಸನೂ ಚೋಗರೆಂಬ ಬೆಲಗದ ಅರಸನೂ ಹೊರಟು,


ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು.


“ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು;


ನಾನು ಸಮಾರ್ಯ ಮತ್ತು ಅದರ ವಿಗ್ರಹಗಳಿಗೆ ಮಾಡಿದಂತೆಯೇ ಯೆರೂಸಲೇಮಿಗೆ ಮತ್ತು ಅದರ ವಿಗ್ರಹಗಳಿಗೆ ಮಾಡುತ್ತೇನೆಯೇ?’ ”


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು