Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:47 - ಕನ್ನಡ ಸಮಕಾಲಿಕ ಅನುವಾದ

47 ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 “ಆದರೆ ನೀನು ನಡೆದ ದುರ್ಮಾರ್ಗ ಅವರು ನಡೆದಂಥದಲ್ಲ. ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ. ಅವರ ದುರ್ನಡತೆ ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡಿಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಅವರಿಗಿಂತಲೂ ಹೆಚ್ಚು ಕೆಟ್ಟು ಹೋಗಲು ನಿನಗೆ ಸ್ವಲ್ಪ ಸಮಯವೇ ಸಾಕಾಯಿತು. ಅವರಿಗಿಂತಲೂ ಇನ್ನೂ ಭಯಂಕರವಾದ ಕೆಲಸಗಳನ್ನು ನೀನು ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:47
12 ತಿಳಿವುಗಳ ಹೋಲಿಕೆ  

ಆದರೆ ಜನರು ಕೇಳದೆ ಹೋದರು. ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.


ಸಮಾರ್ಯವೆಂಬಾಕೆಯು ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದೆ. ನೀನು ಮಾಡಿದ ಲೆಕ್ಕವಿಲ್ಲದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.


ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು ಮತ್ತು ಅವಳ ಪುತ್ರಿಯರು; ನೀನು ನಿನ್ನ ಪುತ್ರಿಯರು ಮಾಡಿದೆ ಹಾಗೆ ಮಾಡಿಲಿಲ್ಲ.


ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.


ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.


ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ.


ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು. ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ. ಅವರು ನಿನಗಿಂತ ನೀತಿವಂತರು. ಹೌದು, ನೀನು ನಿನ್ನ ಸಹೋದರಿಯರನ್ನು ನೀತಿವಂತರೆಂದು ತೋರ್ಪಡಿಸಿದ್ದರಿಂದ ನೀನೇ ನಾಚಿಕೆಪಟ್ಟು, ನಿನ್ನ ನಿಂದೆಯನ್ನು ಹೊತ್ತುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು