Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:5 - ಕನ್ನಡ ಸಮಕಾಲಿಕ ಅನುವಾದ

5 ನಿನ್ನನ್ನು ಕರುಣಿಸಿ, ಕಟಾಕ್ಷಿಸಿ ಯಾರೂ ನಿನಗೆ ಒಂದು ಸಹಾಯವನ್ನೂ ಮಾಡಲಿಲ್ಲ. ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನನ್ನು ಕಟಾಕ್ಷಿಸಿ ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದಿ, ನಿನ್ನನ್ನು ಬೈಲಿನಲ್ಲಿ ಬಿಸಾಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇವುಗಳಲ್ಲಿ ಯಾವುದನ್ನೇ ಮಾಡಲು ನಿನಗೋಸ್ಕರ ಯಾರೂ ಸಾಕಷ್ಟು ಮರುಕಪಡಲಿಲ್ಲ. ಜೆರುಸಲೇಮೇ, ನೀನು ಜನಿಸಿದ ದಿನದಲ್ಲಿ ನಿನಗೆ ಜನ್ಮವಿತ್ತವರು ನಿನ್ನನ್ನು ಹೊರಗೆ ಬಯಲಿನಲ್ಲಿ ಎಸೆದುಬಿಟ್ಟರು. ನೀನು ತಿರಸ್ಕರಿಸಲ್ಪಟ್ಟಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:5
13 ತಿಳಿವುಗಳ ಹೋಲಿಕೆ  

ದೇವರು ಬರಿದಾದ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಕಂಡು ನಡೆಸಿದರು. ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು.


ನರಿಗಳೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಹಾಲು ಕುಡಿಸುತ್ತವೆ. ಆದರೆ ನನ್ನ ಜನರು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿದ್ದಾರೆ.


“ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು.


ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.


ಅಬ್ರಹಾಮನಿಗೆ, “ಈ ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಈ ದಾಸಿಯ ಮಗನು ನನ್ನ ಮಗ ಇಸಾಕನ ಸಂಗಡ ಬಾಧ್ಯನಾಗಬಾರದು,” ಎಂದಳು.


“ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ ತನ್ನ ಎದೆಹಾಲನ್ನು ಕುಡಿಯುವ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆಯುವುದಿಲ್ಲ.


ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.


ಕನಿಕರ ತುಂಬಿದ ಸ್ತ್ರೀಯರ ಕೈಗಳು ತಮ್ಮ ಸ್ವಂತ ಮಕ್ಕಳನ್ನೇ ಬೇಯಿಸಿದವು. ಇವರು ನನ್ನ ಜನರ ನಾಶದಲ್ಲಿ ಅವರಿಗೆ ಆಹಾರವಾದರು.


ಎದ್ದೇಳು, ರಾತ್ರಿಯಲ್ಲಿ ಕೂಗು. ನಿನ್ನ ಹೃದಯವನ್ನು ಕರ್ತದೇವರ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ ನೀರಿನಂತೆ ಹೊಯ್ದುಬಿಡಿರಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಏಕೆಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.


ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.


ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು. ಅವನನ್ನು ಎಳೆದುಕೊಂಡು ಹೋಗಿ, ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.”


“ ‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು