Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:7 - ಕನ್ನಡ ಸಮಕಾಲಿಕ ಅನುವಾದ

7 ಹೊಲದಲ್ಲಿಯ ಮೊಳಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು, ನೀನು ಬಲಿತು, ಪ್ರಾಯವು ತುಂಬಿ, ನೀನು ಅತಿ ಸುಂದರಿಯಾದೆ, ನಿನ್ನ ಸ್ತನಗಳು ರೂಪಗೊಂಡವು, ನಿನ್ನ ಕೂದಲು ಬೆಳೆಯಿತು, ಮೊದಲು ನೀನು ಬರೀ ಬೆತ್ತಲೆಯಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಭೂಮಿಯಲ್ಲಿ ಮೊಳಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಿದೆ; ನೀನು ಬಲಿತು ಪ್ರಾಯ ತುಂಬಿ ಅತಿ ಸುಂದರಿಯಾದೆ; ನಿನಗೆ ಸ್ತನಗಳು ಮೂಡಿದವು. ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಭೂವಿುಯಲ್ಲಿ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಬಂತು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು, ಹೊಲದಲ್ಲಿ ಸಸಿಯು ಹೇಗೆ ಬೆಳೆಯುತ್ತದೋ ಹಾಗೆಯೇ ನೀನು ಬೆಳೆಯಲು ಸಹಾಯ ಮಾಡಿದೆನು. ನೀನು ಬೆಳೆಯುತ್ತಾ ಯೌವನದ ಹೊಸ್ತಿಲಲ್ಲಿ ಕಾಲಿಟ್ಟ ಹೆಂಗಸಿನಂತಾದೆ. ನಿನಗೆ ಮುಟ್ಟು ಪ್ರಾರಂಭವಾಯಿತು. ನಿನ್ನ ಸ್ತನಗಳು ಬೆಳೆದವು. ಕೂದಲುಗಳು ಬೆಳೆದವು. ಆದರೂ ನೀನು ಬಟ್ಟೆಯಿಲ್ಲದವಳಾಗಿ ಬೆತ್ತಲೆಯಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:7
28 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಿದ್ದಾರೆ. ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.


ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.


ಯೆಹೋವ ದೇವರ ಕೈಯಲ್ಲಿ ಮಹಿಮೆಯ ಕಿರೀಟವಾಗಿಯೂ, ನಿನ್ನ ದೇವರ ಅಂಗೈಯಲ್ಲಿ ರಾಜ ಮುಕುಟವಾಗಿಯೂ ಇರುವೆ.


“ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು.


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.


ಎಲ್ಲಾ ಅಸಹ್ಯ ಕಾರ್ಯಗಳನ್ನೂ, ವ್ಯಭಿಚಾರಗಳನ್ನೂ ಮಾಡುತ್ತಿದ್ದಾಗ, ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ, ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದುದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾ ಸ್ಥಳದಲ್ಲಿ ವ್ಯಭಿಚಾರ ಮಾಡಿದೆ; ನೀನು ಅವನ ಬಳಿಗೆ ಹೋದೆ ಮತ್ತು ಅವನು ನಿನ್ನ ಸೌಂದರ್ಯವನ್ನು ತೆಗೆದುಕೊಂಡಿದ್ದಾನೆ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ನಿನ್ನ ಎರಡು ಸ್ತನಗಳು ನೆಲದಾವರೆಯ ನಡುವೆ ಮೇಯುವ ಹುಲ್ಲೆಯ ಅವಳಿಮರಿಗಳ ಹಾಗಿವೆ.


ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.


ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ.


ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ.


ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”


ಇದಲ್ಲದೆ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನಿಯಮದ ಪ್ರಕಾರ ನೀತಿ ಮತ್ತು ನ್ಯಾಯನಿಯಮಗಳುಳ್ಳ ದೊಡ್ಡ ಜನಾಂಗ ಯಾವುದು?


ಆಗ ಇಸ್ರಾಯೇಲರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಜನರು ಕಾಲುನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣಮಾಡಿದರು.


ಆದರೆ ಪ್ರತಿ ಸ್ತ್ರೀಯು ತನ್ನ ಮನೆಯಲ್ಲಿ ಇಳಿದುಕೊಂಡಿರುವ ಸ್ತ್ರೀಯಿಂದಲೂ ನೆರೆಯವಳಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಮತ್ತು ವಸ್ತ್ರಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಪುತ್ರಪುತ್ರಿಯರ ಮೇಲೆ ಹಾಕಿರಿ. ಹೀಗೆ ನೀವು ಈಜಿಪ್ಟಿನವರನ್ನು ಸೂರೆಮಾಡುವಿರಿ,” ಎಂದರು.


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಪ್ರಾಯಕ್ಕೆ ಬಾರದ ತಂಗಿ ಒಬ್ಬಳು ನಮಗಿದ್ದಾಳೆ. ಅವಳನ್ನು ಮದುವೆಗಾಗಿ ಮಾತಾಡಲು ಯಾರಾದರೂ ಬಂದರೆ, ನಾವೇನು ಮಾಡೋಣ?


ನಾನು ಗೋಡೆಯಂಥವಳೇ, ನನ್ನ ಯೌವನವು ಬುರುಜುಗಳು. ಹೀಗೆ ನಾನು ಅವನ ದೃಷ್ಟಿಯಲ್ಲಿ ಸಮಾಧಾನ ಹೊಂದುವೆನು.


“ ‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು.


ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಲಿ, ಅವರು ವಾಗ್ದಾನ ಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು