ಯೆಹೆಜ್ಕೇಲನು 16:8 - ಕನ್ನಡ ಸಮಕಾಲಿಕ ಅನುವಾದ8 “ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |