Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:10 - ಕನ್ನಡ ಸಮಕಾಲಿಕ ಅನುವಾದ

10 ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾಟಿಕೊಂಡಿದ್ದ ಆ ಲತೆ ಸಮೃದ್ಧವಾಗಿಯೇ ಇರುವುದೇ? ಮೂಡಣಗಾಳಿ ಬಡಿಯುವಾಗ ಅದು ಖಂಡಿತವಾಗಿ ಬಾಡುವುದಲ್ಲವೆ? ಬೆಳೆದ ಪಾತಿಯಲ್ಲಿಯೇ ಅದು ಒಣಗಿಹೋಗುವುದಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವದಲ್ಲವೆ; ಬೆಳೆದ ಪಾತಿಯಲ್ಲಿಯೇ ಒಣಗಿ ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಸಿಯು ನೆಟ್ಟಿದ ಸ್ಥಳದಲ್ಲಿ ಬೆಳೆಯುವುದೋ? ಇಲ್ಲ! ಪೂರ್ವದ ಬಿಸಿಗಾಳಿಯು ಬೀಸುವದು, ಆಗ ಸಸಿಯು ತಾನು ನೆಡಲ್ಪಟ್ಟಿದ್ದ ಸ್ಥಳದಲ್ಲೇ ಬಾಡಿಹೋಗಿ ಸಾಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:10
12 ತಿಳಿವುಗಳ ಹೋಲಿಕೆ  

ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ


ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.


ಬೆಳಿಗ್ಗೆ ಅವರು ಅದೇ ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರ ಮರವು ಬೇರುಸಹಿತವಾಗಿ ಒಣಗಿರುವುದನ್ನು ಕಂಡರು.


ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.


ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.


ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.


ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರಿಸುವವರೆಗೂ ಅವನು ಅಲ್ಲಿಯೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಯೆಹೋವ ದೇವರ ನುಡಿ,’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.


“ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ಅವುಗಳ ಹಿಂದೆಯೇ ಪೂರ್ವದಿಕ್ಕಿನ ಗಾಳಿಯಿಂದ ಬತ್ತಿ, ಒಣಗಿ ಹೋದ ಏಳು ತೆನೆಗಳು ಮೊಳೆತವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು