Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಅರಸನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು, ತನ್ನ ರಾಯಭಾರಿಗಳನ್ನು ಈಜಿಪ್ಟಿಗೆ ಕಳುಹಿಸಿ, ತನಗೆ ಕುದುರೆಗಳನ್ನೂ, ಬಹಳ ಜನರನ್ನೂ ಕೊಡಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿಯಾಗುವನೋ? ಇಂತಹ ಸಂಗತಿಗಳನ್ನು ಮಾಡುವವನು ತಪ್ಪಿಸಿಕೊಳ್ಳುವನೋ ಅಥವಾ ಒಡಂಬಡಿಕೆಯನ್ನು ಮುರಿದು ತಪ್ಪಿಸಿಕೊಳ್ಳಲಾಗುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಅವನು ಬಾಬಿಲೋನಿನ ಅರಸನ ವಿರುದ್ಧ ದಂಗೆಯೆದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಈಜಿಪ್ಟಿಗೆ ರಾಯಭಾರಿಗಳನ್ನು ಕಳುಹಿಸಿದ. ಆದರೂ ಇವನು ಗೆಲ್ಲುವನೇ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೇ? ಒಪ್ಪಂದವನ್ನು ಮೀರಿದವನು ತಪ್ಪಿಸಿಕೊಂಡಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಇವನು ಸಮೃದ್ಧನಾಗಿಯೇ ಇರುವನೋ? ಇಂಥಾ ಕೃತ್ಯಗಳನ್ನು ನಡಿಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:15
29 ತಿಳಿವುಗಳ ಹೋಲಿಕೆ  

“ ‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು.


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’ ” ಎಂದನು.


ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.


ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.


ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು.


“ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ.


“ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?


“ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.


ಈ ಯೆಹೂದದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ, ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತನಾಡುವನು.


ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ದೇವರೇ ಜನರನ್ನು ಕಠಿಣವಾಗಿ ದಂಡಿಸಿರಿ.


ಕತ್ತೆಗಳಂತೆ ಬೆದೆಯುಳ್ಳವರು ಕುದುರೆಗಳಂತೆ ದಾಟುವವರು ಆದ ತನ್ನ ಪ್ರಿಯರನ್ನು ಮೋಹಿಸಿದಳು.


ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದೆ; ಅವರು ನಿನ್ನನ್ನು ಆದರಿಸಿಕೊಂಡಾಗ ನೀನು ಮುರಿದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.


ಇನ್ನು ಅದು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಇವರು ಅವರ ಕಡೆಗೆ ನೋಡಿದಾಗ ಪಾಪವನ್ನು ಜ್ಞಾಪಕಕ್ಕೆ ತರುವರು. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಉಳಿಸಬೇಕು. ಆದರೆ ನಾವು ಅವರಿಗೆ ಹೀಗೆ ಮಾಡೋಣ.


ಯುದ್ಧಕ್ಕೆ ಬೇಕಾದ ಆಲೋಚನೆಯೂ, ಪರಾಕ್ರಮವೂ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀಯೆ?


“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು