ಯೆಹೆಜ್ಕೇಲನು 17:16 - ಕನ್ನಡ ಸಮಕಾಲಿಕ ಅನುವಾದ16 “ ‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇಮಕಗೊಂಡನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಪ್ಪಂದವನ್ನು ಮೀರಿದನೋ, ಆ ಅರಸನ ಬಳಿಯಲ್ಲೆ, ಅಂದರೆ ಬಾಬಿಲೋನೆಂಬ ಅವನ ವಾಸಸ್ಥಾನದಲ್ಲೆ, ಇವನು ಸಾಯುವುದು ಖಂಡಿತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇವಿುಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವದು ಖಂಡಿತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಬೂಕದ್ನೆಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.