Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:2 - ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಇಸ್ರಯೇಲ್ ವಂಶದವರಿಗೆ ಈ ಸಾಮತಿಯನ್ನು ಒಗಟಾಗಿ ಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಈ ಕಥೆಯನ್ನು ಇಸ್ರೇಲ್ ಜನಾಂಗಕ್ಕೆ ಹೇಳು. ಇದರ ಅರ್ಥವೇನೆಂದು ಅವರನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:2
13 ತಿಳಿವುಗಳ ಹೋಲಿಕೆ  

ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.


ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”


ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ನಾನು ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮ್ಯಗಳನ್ನು ಜನರಿಗೆ ಹೇಳಿದ್ದೇನೆ.


ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ಆಗ ಯೆಹೋವ ದೇವರಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹೊರಗೆ ತೆಗೆದೆನೆಂದು ಜನರೆಲ್ಲರಿಗೂ ತಿಳಿಯುವುದು, ಅದು ಮತ್ತೆ ತಿರುಗಿ ಬರುವುದೇ ಇಲ್ಲ.’


ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ಅಲ್ಲಿನ ಜನರು ಅಯೋಗ್ಯರೇ? ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆಯೇ? ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲು ಕುಪ್ಪೆಯ ಹಾಗಿವೆ, ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು