Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:20 - ಕನ್ನಡ ಸಮಕಾಲಿಕ ಅನುವಾದ

20 ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಅವನಿಗೆ ಉರುಲನ್ನೊಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:20
24 ತಿಳಿವುಗಳ ಹೋಲಿಕೆ  

ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಆದ್ದರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು. ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.


ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.


ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.


ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಬರುವುದು.


ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ ಕಿವಿಗೊಡಿರಿ. ಏಕೆಂದರೆ ಯೆಹೋವ ದೇವರಿಗೆ ತಮ್ಮ ಜನರ ವಿರುದ್ಧ ವ್ಯಾಜ್ಯವಿದೆ, ಅವರು ಇಸ್ರಾಯೇಲಿನ ವಿರುದ್ಧ ಆರೋಪಿಸುತ್ತಾರೆ.


ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು. ಆಕಾಶದ ಪಕ್ಷಿಗಳ ಹಾಗೆ, ಅವರನ್ನು ಕೆಳಗೆ ಇಳಿಸಿ, ಅವರು ಒಟ್ಟಿಗೆ ಸೇರುವುದನ್ನು ನಾನು ಕೇಳಿದಾಗ, ನಾನು ಅವುಗಳನ್ನು ಹಿಡಿಯುತ್ತೇನೆ.


“ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, ಮತ್ತು ನಾನು ಅವಳ ಗಂಡನಲ್ಲ. ಅವಳು ತನ್ನ ವ್ಯಭಿಚಾರದ ನೋಟವನ್ನು ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿದ್ದಾನೆ. ಆತನು ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ, ಆತನು ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾರೆ. ಆತನು ನನ್ನನ್ನು ದಿನವೆಲ್ಲಾ ಹಾಳಾಗಿಯೂ, ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.


ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


“ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.


ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.


ನಾನು ತಲೆಯೆತ್ತಿದರೆ, ಸಿಂಹದಂತೆ ನನ್ನನ್ನು ಬೇಟೆಯಾಡುತ್ತೀರಿ; ನನ್ನ ವಿರುದ್ಧ ನಿಮ್ಮ ಅದ್ಭುತ ಶಕ್ತಿಯನ್ನು ಪ್ರದರ್ಶಿಸುವಿರಿ.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.


ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು.


“ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು.


“ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ, ನಿಮ್ಮನ್ನು ಬಿಟ್ಟುಹೋಗಿರುವ ಬಾಬಿಲೋನಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು