ಯೆಹೆಜ್ಕೇಲನು 17:22 - ಕನ್ನಡ ಸಮಕಾಲಿಕ ಅನುವಾದ22 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರನಾದ ದೇವರ ವಾಣಿಯಿದು; ನಾನೇ ನೆಡುವೆನು ರೆಂಬೆಯೊಂದನು ಎತ್ತರದ ದೇವದಾರು ಮರದ ಮೇಲಿಂದ ತಂದು ತುಟ್ಟತುದಿಯ ಚಿಗುರುಗಳಲ್ಲೊಂದನ್ನು ತಂದು ಅತಿ ಕೋಮಲವಾದುದನ್ನು ಚಿವುಟಿ ತಂದು, ನೆಡುವೆನದನು ಉನ್ನತೋನ್ನತವಾದ ಪರ್ವತದಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿಕೋಮಲವಾದದ್ದನ್ನು ಚಿವುಟಿ ಉನ್ನತೋನ್ನವಾದ ಪರ್ವತದ ಮೇಲೆ ನಾಟುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ನಾನು ಎತ್ತರವಾದ ದೇವದಾರು ಮರದಿಂದ ಒಂದು ಕೊಂಬೆಯನ್ನು ಕೀಳುವೆನು. ಆ ಮರದ ಮೇಲಿರುವ ಒಂದು ಸಣ್ಣ ಕೊಂಬೆಯನ್ನು ಕೀಳುವೆನು. ಅದನ್ನು ನಾನು ಎತ್ತರವಾದ ಪರ್ವತದಲ್ಲಿ ನೆಡುವೆನು. ಅಧ್ಯಾಯವನ್ನು ನೋಡಿ |