Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:23 - ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ಅದನ್ನು ಇಸ್ರಾಯೇಲಿನ ಪರ್ವತಾಗ್ರದಲ್ಲಿ ನೆಡಲು ಅದು ಸೊಂಪಾದ ದೇವದಾರುಮರವಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದು; ಅದರಲ್ಲಿ ಸಕಲವಿಧಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸ್ವತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಬೆಗಳ ಮೇಲೆ ಅನೇಕ ಬಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಬೆಯ ನೆರಳಿನಲ್ಲಿ ವಿವಿಧ ಬಗೆಯ ಪಕ್ಷಿಗಳು ವಾಸಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:23
34 ತಿಳಿವುಗಳ ಹೋಲಿಕೆ  

ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದ್ದರೂ ಅದು ಬೆಳೆದಾಗ, ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು, ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡುತ್ತವೆ.”


ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು. ಅದರ ರೆಂಬೆಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮ ಕೊಟ್ಟವು. ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.


ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.


ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವ ದೇವರು ಹೇಳುವುದೇನೆಂದರೆ,” ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವೆ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿಕೊಳ್ಳುವೆ.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ಅದನ್ನು ಬಿತ್ತಿದ ಮೇಲೆ, ಅದು ಬೆಳೆದು ತೋಟದ ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡ ರೆಂಬೆಗಳುಳ್ಳ ಮರವಾಗಿ ಬೆಳೆಯುತ್ತದೆ. ಆಕಾಶದ ಪಕ್ಷಿಗಳು ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುತ್ತವೆ,” ಎಂದು ಹೇಳಿದರು.


ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಬಿತ್ತಲು, ಅದು ಬೆಳೆದು ಒಂದು ದೊಡ್ಡ ಮರವಾಯಿತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡಿದವು,” ಎಂದರು.


ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.


ಅವನ ಕಾಲುಗಳು ಶುದ್ಧ ಬಂಗಾರದ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ತೋರಿಕೆಯು ಲೆಬನೋನಿನ ದೇವದಾರುಗಳ ಹಾಗೆ ಶ್ರೇಷ್ಠವಾಗಿವೆ.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


“ ‘ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹರಡಿಸಿ ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವಿರಿ. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.


ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.


ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.


ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


“ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು.


ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು