ಯೆಹೆಜ್ಕೇಲನು 17:24 - ಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “ ‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ ತಗ್ಗಾದದ್ದನ್ನು ಎತ್ತರಪಡಿಸಿ ಹಸುರಾದದ್ದನ್ನು ಒಣಗಿಸಿ ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲವೃಕ್ಷಗಳು ತಿಳಿಯುವವು; ಇದನ್ನು ಯೆಹೋವನಾದ ನಾನೇ ನುಡಿದು ನಡಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.” ಅಧ್ಯಾಯವನ್ನು ನೋಡಿ |