ಯೆಹೆಜ್ಕೇಲನು 17:7 - ಕನ್ನಡ ಸಮಕಾಲಿಕ ಅನುವಾದ7 “ ‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “‘ಅಗಲವಾದ ರೆಕ್ಕೆಗಳುಳ್ಳ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಆದರೆ ಅಗಲವಾದ ರೆಕ್ಕೆಗಳುಳ್ಳ ಗರಿತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆ ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಗಲವಾದ ರೆಕ್ಕೆಗಳುಳ್ಳ ತುಪ್ಪಳತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾರೈಸುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ಅಗಲ ರೆಕ್ಕೆಗಳಿದ್ದ ಇನ್ನೊಂದು ಹದ್ದು ದ್ರಾಕ್ಷಾಲತೆಯನ್ನು ನೋಡಿತು. ಈ ಹದ್ದಿಗೆ ತುಂಬಾ ಪುಕ್ಕಗಳಿದ್ದವು. ದ್ರಾಕ್ಷಾಲತೆಯು ತನ್ನ ಬೇರುಗಳನ್ನು ಹದ್ದಿನ ಕಡೆಗೆ ತಿರುಗಿಸಿತ್ತು. ಹದ್ದಿಗೆ ನೀರು ಹಾಯಿಸಲು ಸಾಧ್ಯವಾಗುವಂತೆ ಅದು ತನ್ನ ರೆಂಬೆಗಳನ್ನು ಹದ್ದಿನ ಕಡೆಗೆ ಚಾಚಿಕೊಂಡಿತ್ತು. ಅದು ತಾನು ನೆಡಲ್ಪಟ್ಟಿದ್ದ ಸ್ಥಳದಿಂದ ಬೇರೆ ಕಡೆಗೆ ತಿರುಗಿಕೊಂಡಿತು. ಅಧ್ಯಾಯವನ್ನು ನೋಡಿ |