Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:14 - ಕನ್ನಡ ಸಮಕಾಲಿಕ ಅನುವಾದ

14 “ಒಂದು ವೇಳೆ ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಆಲೋಚಿಸಿ, ಇಂಥಾ ಕಾರ್ಯಗಳನ್ನು ನಡೆಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಇಗೋ, ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು, ಇಂಥಾ ಕಾರ್ಯಗಳನ್ನು ನಡೆಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಗೋ, ಇವನು ಪಡೆದ ಮಗನು ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಇಗೋ, ಆ ಕೆಟ್ಟ ಮಗನಿಗೆ ಒಬ್ಬ ಮಗನಿರಬಹುದು. ತಂದೆ ಮಾಡುವ ದುಷ್ಕೃತ್ಯಗಳನ್ನು ನೋಡಿದ ಅವನು ತಂದೆಯಂತೆ ಜೀವಿಸದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:14
22 ತಿಳಿವುಗಳ ಹೋಲಿಕೆ  

“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.


ನೀತಿವಂತನ ತಂದೆಯು ಬಹಳವಾಗಿ ಸಂತೋಷಪಡುವನು; ಜ್ಞಾನಿಯಾದ ಮಗುವನ್ನು ಪಡೆದವನಿಗೆ ಅವನಿಂದ ಆನಂದವಾಗುವುದು.


ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.


ಹಾಗಾದರೆ ನಿಮ್ಮ ಪಿತೃಗಳ ಅಪರಾಧದ ಅಳತೆಯನ್ನು ನೀವೇ ಪೂರ್ಣಗೊಳಿಸಿರಿ.


ಚೆನ್ನಾಗಿ ನೆನಪಿಗೆ ತಂದುಕೊಳ್ಳಿರಿ. ಇಂದಿನಿಂದ ಇದಕ್ಕೆ ಮುಂಚೆ ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ, ಯೆಹೋವ ದೇವರ ಮಂದಿರದ ಅಸ್ತಿವಾರವು ಹಾಕಲಾದ ದಿನದಿಂದ ಸೂಕ್ಷ್ಮವಾಗಿ ಯೋಚಿಸಿಕೊಳ್ಳಿರಿ.


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.


ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.


ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. ಅವು ನನ್ನ ಮುಖದ ಮುಂದೆ ಇವೆ.


ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ.


ಏಕೆಂದರೆ ಅವನು ತಾನು ಮಾಡಿದ ದುಷ್ಕೃತ್ಯಗಳನ್ನು ಯೋಚಿಸಿ, ಅವುಗಳನ್ನು ಬಿಟ್ಟು ತಿರುಗಿಕೊಳ್ಳುವುದರಿಂದ ಸಾಯದೆ ನಿಶ್ಚಯವಾಗಿ ಬದುಕುವನು.


“ಒಂದು ವೇಳೆ ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,


ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.


ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.”


ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.


“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ಬುದ್ಧಿಹೀನ ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವುದಿಲ್ಲ.


“ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,


ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತಿನ ಅದಾಯನ ಮಗಳಾದ ಯೆದೀದಾ ಎಂಬವಳು.


ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು