ಯೆಹೆಜ್ಕೇಲನು 18:17 - ಕನ್ನಡ ಸಮಕಾಲಿಕ ಅನುವಾದ17 ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ, ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯನು, ಅವನು ಜೀವಿಸುವುದು ನಿಶ್ಚಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬಡವನ ಮೇಲೆ ಕೈಮಾಡದೆ ಬಡ್ಡಿಯನ್ನು ಕೇಳದೆ ಲಾಭಕ್ಕೆ ಹಣಕೊಡದೆ ನನ್ನ ವಿಧಿಗಳನ್ನು ಆಚರಿಸಿ ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿವಿುತ್ತ ಸಾಯನು, ಬಾಳೇ ಬಾಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವನು ಬಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು. ಅಧ್ಯಾಯವನ್ನು ನೋಡಿ |