Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:2 - ಕನ್ನಡ ಸಮಕಾಲಿಕ ಅನುವಾದ

2 “ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಈ ಗಾದೆಯನ್ನು ಉಲ್ಲೇಖಿಸುವುದರ ಅರ್ಥವೇನು: “ ‘ಪಿತೃಗಳು ಹುಳಿದ್ರಾಕ್ಷಿಗಳನ್ನು ತಿಂದರು, ಮಕ್ಕಳ ಹಲ್ಲು ಚಳಿತು ಹೋಯಿತು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಹೆತ್ತವರು ತಿಂದರು ಹುಳಿದ್ರಾಕ್ಷಿಯನ್ನು; ಚಳಿತುಹೋದವು ಅವರ ಮಕ್ಕಳ ಹಲ್ಲುಗಳು” ಎಂಬ ಗಾದೆಯನ್ನು ನೀವು ಇಸ್ರಯೇಲ್‍ ನಾಡನ್ನು ಕುರಿತು ಹೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಂದೆಗಳು ಹುಳಿದ್ರಾಕ್ಷೆಯನ್ನು ತಿಂದರು, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲ್ ದೇಶದ ಕುರಿತಾದ ಈ ಗಾದೆಯನ್ನು ನೀವೆಲ್ಲರೂ ಮರುನುಡಿಯುವುದೇಕೆ? ‘ಹೆತ್ತವರು ಹುಳಿ ದ್ರಾಕ್ಷಿಹಣ್ಣನ್ನು ತಿಂದಾಗ ಮಕ್ಕಳ ಬಾಯಿ ಹುಳಿಯಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:2
21 ತಿಳಿವುಗಳ ಹೋಲಿಕೆ  

ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.


ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎಫ್ರಾಯೀಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು,’ ಎಂದು ಹೇಳು.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’


“ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.


ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.


ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ನಿಮಗೆ ನಿಜವಾಗಿ ಹೇಳುತ್ತೇನೆ: ಇವೆಲ್ಲವೂ ಈ ಸಂತತಿಯವರ ಮೇಲೆ ಬರುವವು.


ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ


ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.


“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “ ‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!


‘ದೇವರು ದುಷ್ಟರ ಮಕ್ಕಳಿಗೆ ಅವರ ಅಪರಾಧ ಫಲವನ್ನು ಕಾದಿಡುತ್ತಾರೆ,’ ಎಂದು ಹೇಳುತ್ತಾರಲ್ಲಾ? ಆ ದುಷ್ಟರು ಅನುಭವಿಸುವ ಹಾಗೆ ದೇವರು ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸಲಿ.


“ಮನುಷ್ಯಪುತ್ರನೇ, ‘ದಿನಗಳು ಬಹಳವಾಗುತ್ತಿವೆ. ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂದು ಇಸ್ರಾಯೇಲ್ ದೇಶದಲ್ಲಿ ಹೇಳಿಕೊಳ್ಳುವ ಈ ಗಾದೆ ಏನು’?


“ ‘ “ತಾಯಿಯಂತೆ ಮಗಳು,” ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಪ್ರತಿಯೊಬ್ಬರು ಹೇಳುವರು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವುದಿಲ್ಲ.


“ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು