Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:3 - ಕನ್ನಡ ಸಮಕಾಲಿಕ ಅನುವಾದ

3 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಜನರು ಇನ್ನು ಮುಂದಕ್ಕೆ ಈ ಗಾದೆಯು ಸತ್ಯವೆಂದು ನೆನಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:3
9 ತಿಳಿವುಗಳ ಹೋಲಿಕೆ  

“ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


“ಮನುಷ್ಯಪುತ್ರನೇ, ‘ದಿನಗಳು ಬಹಳವಾಗುತ್ತಿವೆ. ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂದು ಇಸ್ರಾಯೇಲ್ ದೇಶದಲ್ಲಿ ಹೇಳಿಕೊಳ್ಳುವ ಈ ಗಾದೆ ಏನು’?


“ ‘ “ತಾಯಿಯಂತೆ ಮಗಳು,” ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಪ್ರತಿಯೊಬ್ಬರು ಹೇಳುವರು.


“ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಈ ಗಾದೆಯನ್ನು ಉಲ್ಲೇಖಿಸುವುದರ ಅರ್ಥವೇನು: “ ‘ಪಿತೃಗಳು ಹುಳಿದ್ರಾಕ್ಷಿಗಳನ್ನು ತಿಂದರು, ಮಕ್ಕಳ ಹಲ್ಲು ಚಳಿತು ಹೋಯಿತು.’


ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು