Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:8 - ಕನ್ನಡ ಸಮಕಾಲಿಕ ಅನುವಾದ

8 ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಾಲಕ್ಕೆ ಬಡ್ಡಿ ತೆಗೆಯದೆ ಲಾಭಕ್ಕೆ ಹಣಕೊಡದೆ ಅನ್ಯಾಯಕ್ಕೆ ಕೈಹಾಕದೆ ವಾದಿಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:8
26 ತಿಳಿವುಗಳ ಹೋಲಿಕೆ  

“ನಿಮ್ಮ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ, ಅವನಿಂದ ಬಡ್ಡಿ ತೆಗೆದುಕೊಳ್ಳಬಾರದು.


ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು.


ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.


ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ನೀತಿಯಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈಚಾಚಿದೆ. ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ಕಾಣದಂತೆ ಕಣ್ಣು ಮುಚ್ಚಿಕೊಳ್ಳುವವರೇ ಉನ್ನತ ಸ್ಥಳದಲ್ಲಿ ವಾಸಿಸುವರು.


ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು, ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.


“ ‘ನಿಮ್ಮ ನಿರ್ಣಯದಲ್ಲಿಯೂ, ಅಳೆಯುವುದರಲ್ಲಿಯೂ, ತೂಕದಲ್ಲಿಯೂ, ಅಳತೆಯಲ್ಲಿಯೂ ನೀವು ಅನ್ಯಾಯ ಮಾಡಬೇಡಿರಿ.


“ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.


ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”


ನೀನು ನಿನ್ನ ದೇವರಾದ ಯೆಹೋವ ದೇವರಿಗೆ ಹರಕೆಮಾಡಿದ ಮೇಲೆ ಅದನ್ನು ಸಲ್ಲಿಸುವುದಕ್ಕೆ ತಡಮಾಡಬೇಡ. ಏಕೆಂದರೆ ನಿನ್ನ ದೇವರಾದ ಯೆಹೋವ ದೇವರು ಅದನ್ನು ನಿಶ್ಚಯವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವರು. ತೀರಿಸದೆ ಹೋಗುವದು ಪಾಪ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು