Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:14 - ಕನ್ನಡ ಸಮಕಾಲಿಕ ಅನುವಾದ

14 ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬೆಂಕಿಯು ದಂಡರೂಪವಾದ ಅದರ ಶಾಖೆಗಳಿಂದ ಹೊರಟು ಅದರ ಫಲವನ್ನು ನುಂಗಿಬಿಟ್ಟದ್ದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕಗೀತ, ಶೋಕಗೀತವಾಗಿ ವಾಡಿಕೆಯಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:14
27 ತಿಳಿವುಗಳ ಹೋಲಿಕೆ  

ಆಳುವವರ ರಾಜದಂಡಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ. ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ. ಹಾಗೆಯೇ ಅದು ಬಹು ಕೊಂಬೆಗಳ ಮಧ್ಯದಲ್ಲಿ ಎತ್ತರವಾಗಿ ಕಾಣಬರುತ್ತಿದೆ.


“ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಬೇಕೆ?” ಎಂದು ಕೇಳಿದನು. ಆಗ ಮುಖ್ಯಯಾಜಕರು, “ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಆಗ ಅವರು, “ನಮಗೆ ಅರಸನಿಲ್ಲ, ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ. ಅರಸನು ನಮಗಿದ್ದರೂ ಏನು ಮಾಡುವನು?” ಎಂದುಕೊಳ್ಳುತ್ತಾರೆ.


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು.


ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ?


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


“ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು.


ಏಕೆಂದರೆ ಅವರು ಯಾಕೋಬರನ್ನು ನುಂಗಿಬಿಟ್ಟಿದ್ದಾರೆ. ಅವರ ನಿವಾಸವನ್ನು ಹಾಳು ಮಾಡಿದ್ದಾರೆ.


ನಮ್ಮ ಪಾಪಗಳ ನಿಮಿತ್ತ ನೀವು ನಮ್ಮ ಮೇಲೆ ಇಟ್ಟ ಅರಸರಿಗೆ ಅದರ ಹುಟ್ಟುವಳಿ ಬಹಳವಾಗಿ ಹೋಗುತ್ತಿದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಮೇಲೆಯೂ, ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ. ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.


ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.


“ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು.


ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’ ”


ಯೆಹೋವ ದೇವರಾದ ನಾನೇ ಅದನ್ನು ಹಚ್ಚಿದೆನೆಂದು ಪ್ರತಿಯೊಬ್ಬರೂ ತಿಳಿದುಕೊಳ್ಳುವರು, ಅದು ಆರಿಹೋಗುವುದಿಲ್ಲ.’ ”


ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: “ ‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, ಸಮುದ್ರದ ಮೇಲೆ ಬಲಗೊಂಡ ನಗರವೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು