Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:4 - ಕನ್ನಡ ಸಮಕಾಲಿಕ ಅನುವಾದ

4 ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು, ಅವರ ಗುಂಡಿಯಲ್ಲಿ ಇದನ್ನು ಹಿಡಿದುಕೊಂಡರು. ಸಂಕೋಲೆಗಳಿಂದ ಬಂಧಿಸಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜನಾಂಗಗಳು ಈ ವಾರ್ತೆಯನ್ನು ಕೇಳಿ, ಅದಕ್ಕೆ ಗುಂಡಿ ತೋಡಲು ಅದು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಣಿಗಳಿಂದ ಬಿಗಿದು ಐಗುಪ್ತ ದೇಶಕ್ಕೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದ ಕೇಳಿದ ರಾಷ್ಟ್ರಗಳು ಹಿಡಿದವದನ್ನು ಗುಂಡಿತೋಡಿ, ಈಜಿಪ್ಟ್ ದೇಶಕೊಯ್ದವು ಅದಕ್ಕೆ ಬಿಗಿದು ಸರಪಣಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜನಾಂಗಗಳು ಈ ವಾರ್ತೆಯನ್ನು ಕೇಳಿ ಅದಕ್ಕೆ ಗುಂಡಿತೋಡಲು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಣಿಗಳಿಂದ ಬಿಗಿದು ಐಗುಪ್ತದೇಶಕ್ಕೆ ಒಯ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “‘ಅದು ಗರ್ಜಿಸುವ ಶಬ್ದವನ್ನು ಜನರು ಕೇಳಿದರು. ಜನಾಂಗಗಳು ಅದರ ಬಗ್ಗೆ ಕೇಳಿದರು. ಅದನ್ನು ತಮ್ಮ ಗುಂಡಿಯಲ್ಲಿ ಅವರು ಬಂಧಿಸಿದರು. ಅವರು ಅದರ ಬಾಯಿಗೆ ಕೊಂಡಿಯನ್ನು ಹಾಕಿ ಈಜಿಪ್ಟಿಗೆ ಅದನ್ನು ಕೊಂಡೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:4
8 ತಿಳಿವುಗಳ ಹೋಲಿಕೆ  

ಇದಲ್ಲದೆ ಈಜಿಪ್ಟ್ ಅರಸನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ನೆಕೋವನು ಎಲ್ಯಾಕೀಮನ ಸಹೋದರನಾದ ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು.


ಆದ್ದರಿಂದ ಯೋಷೀಯನ ಮಗ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವರು ಅವನನ್ನು ಕುರಿತು ಗೋಳಾಡಿ, ‘ಅಯ್ಯೋ, ನನ್ನ ಸಹೋದರನೇ, ಅಯ್ಯೋ, ನನ್ನ ಸಹೋದರಿಯೇ,’ ಎಂದು ಅನ್ನುವುದಿಲ್ಲ. ‘ಅಯ್ಯೋ, ದೊರೆಯೇ, ಅಯ್ಯೋ, ಅವನ ವೈಭವವೇ,’ ಎಂದು ಅವನನ್ನು ಕುರಿತು ಗೋಳಾಡುವುದಿಲ್ಲ.


ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಊರಿನ ಯೆರೆಮೀಯನ ಮಗಳಾದ ಹಮೂಟಲ್.


ಅವಳೂ ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು, ಇದು ಪ್ರಾಯದ ಸಿಂಹವಾಯಿತು. ಇದು ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.


“ ‘ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕಳೆದುಕೊಂಡೆನೆಂದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು, ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು