Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಜನಾಂಗಗಳು ಸುತ್ತಲಿನ ಪ್ರಾಂತಗಳೊಳಗಿಂದ ಕೂಡಿಬಂದು, ಅದಕ್ಕೆ ವಿರೋಧವಾಗಿ ನಿಂತು, ಅದರ ಮೇಲೆ ಬಲೆಯನ್ನೊಡ್ಡಿದರು, ಆಗ ಅದು ಅವರ ಗುಂಡಿಯಲ್ಲಿ ಸಿಕ್ಕಿಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು, ಬಲೆಯೊಡ್ಡಿ ಗುಂಡಿ ತೋಡಲು, ಅದು ಅಲ್ಲಿ ಸಿಕ್ಕಿಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಬಂದವು ಸುತ್ತಲಿನ ರಾಷ್ಟ್ರಗಳು ಒಟ್ಟುಗೂಡಿ, ಸಿಕ್ಕಿಸಿದವು ಅದನ್ನು ಬಲೆಯೊಡ್ಡಿ, ಗುಂಡಿತೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿಬಂದು ಅದಕ್ಕೆ ವಿರುದ್ಧವಾಗಿ ನಿಂತು ಬಲೆಯೊಡ್ಡಿ ಗುಂಡಿತೋಡಲು ಅಲ್ಲಿ ಸಿಕ್ಕಿಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸುತ್ತಮುತ್ತಲಿನ ಜನಾಂಗಗಳವರು ಕೂಡಿಬಂದು ಅದರ ವಿರುದ್ಧವಾಗಿ ನಿಂತು, ಬಲೆಹರಡಿ ಅದನ್ನು ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:8
8 ತಿಳಿವುಗಳ ಹೋಲಿಕೆ  

ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು, ಅವರ ಗುಂಡಿಯಲ್ಲಿ ಇದನ್ನು ಹಿಡಿದುಕೊಂಡರು. ಸಂಕೋಲೆಗಳಿಂದ ಬಂಧಿಸಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.


ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.


ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ಅಷ್ಟರಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತಾನೇ ಆ ಪಟ್ಟಣಕ್ಕೆ ಬಂದನು.


ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.


ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು. ಅವನನ್ನು ಎಳೆದುಕೊಂಡು ಹೋಗಿ, ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು