Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ನನಗೆ, “ನರಪುತ್ರನೇ, ಎದ್ದು ನಿಲ್ಲು; ನಿನ್ನ ಸಂಗಡ ಮಾತಾಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ನನಗೆ - ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸ್ವರವು, “ನರಪುತ್ರನೇ, ಎದ್ದೇಳು ನಾನು ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:1
32 ತಿಳಿವುಗಳ ಹೋಲಿಕೆ  

ಆತನು ನನಗೆ, “ದಾನಿಯೇಲನೇ, ಅತಿ ಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ಏಕೆಂದರೆ ನಾನು ಈಗ ನಿನ್ನ ಬಳಿಗೆ ಕಳುಹಿಸಲಾಗಿದ್ದೇನೆ,” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಮೇಲೆ, ನಾನು ನಡುಗುತ್ತಲೇ ನಿಂತೆನು.


“ಮನುಷ್ಯಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು, ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.


“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


“ಮನುಷ್ಯಪುತ್ರನೇ, ನೀನು ಹರಿತವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ, ಅದರಿಂದ ನಿನ್ನ ತಲೆಯನ್ನೂ ನಿನ್ನ ಗಡ್ಡವನ್ನೂ ಬೋಳಿಸಿಬಿಟ್ಟು, ಆಮೇಲೆ ಅದನ್ನು ತೂಕ ಮಾಡುವುದಕ್ಕೆ ತಕ್ಕಡಿಯನ್ನು ತೆಗೆದುಕೋ. ಆ ಕೂದಲನ್ನು ಭಾಗ ಮಾಡು.


ನನಗೆ ಅವರು, “ಮನುಷ್ಯಪುತ್ರನೇ, ಹೋಗು; ಇಸ್ರಾಯೇಲಿನ ಜನರ ಬಳಿಗೆ ಹೋಗಿ, ನನ್ನ ಮಾತುಗಳನ್ನು ಅವರಿಗೆ ಹೇಳು.


ಇದಾದ ಮೇಲೆ ದೇವರು ನನಗೆ, “ಮನುಷ್ಯಪುತ್ರನೇ, ನಿನಗೆ ಸಿಕ್ಕಿದ್ದ ಈ ಸುರುಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಜನರ ಸಂಗಡ ಮಾತನಾಡು,” ಎಂದರು.


ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.


ನೀನು ಎದ್ದು ನಿಂತುಕೋ, ನೀನು ಕಂಡಿದ್ದವುಗಳಿಗಾಗಿಯೂ ನಾನು ನಿನಗೆ ತೋರಿಸುವಂಥವುಗಳಿಗಾಗಿಯೂ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಲು ನಾನು ನಿನಗೆ ಕಾಣಿಸಿಕೊಂಡಿದ್ದೇನೆ.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.


ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.


ಆಗ ಯೇಸು ಬಂದು ಅವರನ್ನು ಮುಟ್ಟಿ, “ಏಳಿರಿ, ಹೆದರಬೇಡಿರಿ,” ಎಂದು ಹೇಳಿದರು.


“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು.


ಆತನು ನನಗೆ, “ನರಪುತ್ರನೇ, ಈ ಎಲುಬುಗಳು ಜೀವಿಸುವಂಥವೇ?” ಎಂದಾಗ, ನಾನು ಉತ್ತರವಾಗಿ, “ಸಾರ್ವಭೌಮ ಯೆಹೋವ ದೇವರೇ, ನೀವೇ ತಿಳಿದಿರುವಿರಿ,” ಎಂದೆನು.


“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.


“ನರಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡಿ,


“ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?


“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.


“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?


“ನರಪುತ್ರನೇ, ಪ್ರವಾದಿಸುತ್ತಿರುವ ಇಸ್ರಾಯೇಲಿನ ಮನೆತನದ ಪ್ರವಾದಿಗಳಿಗೆ ವಿರುದ್ಧವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಕಲ್ಪನೆಗಳಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ;


“ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.


“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “ ‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!


ಇದಲ್ಲದೆ ಅವರು ನನಗೆ, “ಮನುಷ್ಯಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲ್ಲಾ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.


ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು.


ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.


ನೀವು ಮಾನವರನ್ನು ನೆನಸಲು ಅವರು ಎಷ್ಟರವರು? ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು?


ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.


ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.


ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು.


ಅವರು ನನಗೆ ಹೇಳಿದ್ದೇನೆಂದರೆ: “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಬಲಿಪೀಠವನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು