Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:10 - ಕನ್ನಡ ಸಮಕಾಲಿಕ ಅನುವಾದ

10 ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಸುರುಳಿಯನ್ನು ನನ್ನೆದುರಿನಲ್ಲೆ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಬರೆದಿತ್ತು: ಅದು ಪ್ರಲಾಪ, ಶೋಕ, ಶಾಪ ಇವುಗಳ ಬರಹದಿಂದ ಕೂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಆ ಸುರಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಗೋಳು, ಮೂಲುಗು, ಮೊರೆ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದಾಗ ಅದರ ಮುಂಭಾಗದಲ್ಲಿಯೂ ಹಿಂಭಾಗದಲ್ಲಿಯೂ ಮಾತುಗಳು ಬರೆಯಲ್ಪಟ್ಟಿದ್ದವು. ನಾನಾ ತರದ ಪ್ರಲಾಪಗಳು, ನರಳಾಟಗಳು ಮತ್ತು ಗೋಳಾಟಗಳು ಬರೆಯಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:10
10 ತಿಳಿವುಗಳ ಹೋಲಿಕೆ  

ನಾನು ನೋಡಲಾಗಿ, ಆಕಾಶದ ಮಧ್ಯದಲ್ಲಿ ಹಾರುತ್ತಿರುವ ಒಂದು ಗರುಡ ಪಕ್ಷಿ ಮಹಾಧ್ವನಿಯಿಂದ: ಇನ್ನೂ ಊದಲಿರುವ ಮೂವರು ದೂತರ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ, “ಅಯ್ಯೋ! ಅಯ್ಯೋ! ಅಯ್ಯೋ!” ಎಂದಿತು.


ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.


ಎರಡನೆಯ ವಿಪತ್ತು ಕಳೆದುಹೋಯಿತು. ಮೂರನೆಯ ವಿಪತ್ತು ಬೇಗನೆ ಬರಲಿದೆ.


ಮೊದಲನೆಯ ವಿಪತ್ತು ಕಳೆದುಹೋಯಿತು; ಇಗೋ, ಇವುಗಳ ನಂತರ ಇನ್ನೂ ಎರಡು ವಿಪತ್ತುಗಳು ಬರಲಿವೆ.


ಆಗ ಯೆಹೋವ ದೇವರು ನನಗೆ ಉತ್ತರಕೊಟ್ಟರು. ಪ್ರಕಟನೆಯನ್ನು ಬರೆ. ಅದನ್ನು ಓದುವವನು ಶೀಘ್ರವಾಗಿ ಓದುವಂತೆ, ಅದನ್ನು ಹಲಗೆಗಳ ಮೇಲೆ ಕೆತ್ತು.


ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


“ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,


ನಾನು ದೇವದೂತನ ಕೈಯಿಂದ ಆ ಚಿಕ್ಕ ಸುರುಳಿಯನ್ನು ತೆಗೆದುಕೊಂಡು ತಿಂದೆನು. ಇದರ ರುಚಿಯು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಾಗ, ನನ್ನ ಹೊಟ್ಟೆ ಕಹಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು