Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:3 - ಕನ್ನಡ ಸಮಕಾಲಿಕ ಅನುವಾದ

3 ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ನನ್ನೊಂದಿಗೆ, “ನರಪುತ್ರನೇ, ಇಸ್ರೇಲ್ ಜನಾಂಗದವರೊಡನೆ ಮಾತನಾಡಲು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಎಷ್ಟೋಬಾರಿ ನನಗೆ ವಿರುದ್ಧವಾಗಿ ಎದ್ದರು. ಅವರ ಪೂರ್ವಿಕರೂ ನನಗೆ ವಿರುದ್ಧವಾಗಿ ಎದ್ದಿದ್ದರು. ನನಗೆ ವಿರುದ್ಧವಾಗಿ ಎಷ್ಟೋವೇಳೆ ಪಾಪ ಮಾಡಿದರು. ಈಗಲೂ ಅವರು ಪಾಪ ಮಾಡುತ್ತಲೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:3
42 ತಿಳಿವುಗಳ ಹೋಲಿಕೆ  

ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದೀರಿ.


ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


“ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ?


“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.


“ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “ ‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.


ಆಗ ಯೆಹೋವ ದೇವರು ನನಗೆ, “ ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು.


ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.


“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.


ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಾಕೋಬರನ್ನು ಜ್ಞಾಪಕಮಾಡಿಕೊಳ್ಳಿರಿ. ಈ ಜನರ ಕಾಠಿಣ್ಯದ ಮೇಲೆಯೂ, ಅವರ ದುಷ್ಟತ್ವದ ಮೇಲೆಯೂ, ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡಿ.


ಮೋಶೆಯೂ, ಆರೋನನೂ ಜನರನ್ನು ಬಂಡೆಯ ಮುಂದೆ ಕೂಡಿಸಿ, ಅವರಿಗೆ, “ತಿರುಗಿ ಬಿದ್ದವರೇ ಕೇಳಿರಿ, ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ?” ಎಂದರು.


“ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.


ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.


ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು.


ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”


ಆದರೆ ಅವರು ಕೇಳದೆ ತಮ್ಮ ದೇವರಾದ ಯೆಹೋವ ದೇವರಲ್ಲಿ ನಂಬಿಕೆ ಇಡದೆ ತಮ್ಮ ಪಿತೃಗಳಂತೆ ದೇವರ ಆಜ್ಞೆಗಳಿಗೆ ಮಣಿಯದೆ,


ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.


“ದ್ರೋಹಿಗಳಾದ ಮಕ್ಕಳಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಆಲೋಚನೆಯನ್ನು ಮಾಡುತ್ತಾರೆ ಆದರೆ ನನ್ನಿಂದಲ್ಲ. ನನ್ನ ಆತ್ಮ ಪ್ರೇರಿತರಾಗದೆ ಉಪಾಯಗಳನ್ನು ಮಾಡುತ್ತಾರೆ, ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


ಆಗ ಯೆರೆಮೀಯನು ಜನರೆಲ್ಲರಿಗೂ, ಗಂಡಸರಿಗೂ, ಹೆಂಗಸರಿಗೂ, ತನಗೆ ಉತ್ತರ ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನೆಂದರೆ,


ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಅನುಸರಿಸಲಿಲ್ಲ. ನನ್ನ ಬಳಿಗೆ ತಿರುಗಿಕೊಳ್ಳಿರಿ. ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ಯಾವುದರಲ್ಲಿ ತಿರುಗಿಕೊಳ್ಳೋಣ?’ ಎಂದು ಹೇಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು