Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:4 - ಕನ್ನಡ ಸಮಕಾಲಿಕ ಅನುವಾದ

4 ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರೆ; ನೀನು ಅವರಿಗೆ, ‘ಸರ್ವೇಶ್ವರನಾದ ದೇವರೇ ಇಂತೆನ್ನುತ್ತಾರೆ,’ ಎಂದು ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಜನರೊಂದಿಗೆ ಮಾತನಾಡಲು ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಬಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:4
23 ತಿಳಿವುಗಳ ಹೋಲಿಕೆ  

ಆದರೆ ಇಸ್ರಾಯೇಲಿನ ಜನರೋ ನಿನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಏಕೆಂದರೆ ಅವರು ನನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ. ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ಏಕೆಂದರೆ ನೀನು ಹಟಗಾರ. ನಿನ್ನ ಕತ್ತಿನ ನರಗಳು ಕಬ್ಬಿಣ, ನಿನ್ನ ಹಣೆ ಕಂಚಿನದು ಎಂದು ನಾನು ತಿಳಿದುಕೊಂಡಿದ್ದೇನೆ.


“ನೀವು ಮೆರೀಬದಲ್ಲಿ ಮಾಡಿದಂತೆ, ಹೌದು, ಅಂದು ನೀವು ಮರುಭೂಮಿಯ ಮಸ್ಸಾ ಎಂಬ ಸ್ಥಳದಲ್ಲಿ ಮಾಡಿದಂತೆ, ನಿಮ್ಮ ಹೃದಯವನ್ನು ಕಠಿಣಪಡಿಸಬೇಡಿರಿ.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.


ದುಷ್ಟನು ತನ್ನ ಮುಖವನ್ನು ಕಠಿಣ ಮಾಡಿಕೊಳ್ಳುತ್ತಾನೆ; ಯಥಾರ್ಥವಂತನಾದರೋ ತನ್ನ ಮಾರ್ಗಗಳನ್ನು ಯೋಚಿಸುತ್ತಾರೆ.


ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.


ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರು ನನಗೆ ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.


ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?


ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.


ಆಗ ಯೆಹೋವ ದೇವರು ನನಗೆ, “ ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು.


ಹೀಗೆ ಅರಸನು ಯೆಹೂದಿಯನ್ನು, ಆ ಸುರುಳಿಯನ್ನು ತೆಗೆದುಕೊಂಡು ಬರುವ ಹಾಗೆ ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು. ಯೆಹೂದಿಯು ಅದನ್ನು ಅರಸನಿಗೂ, ಅರಸನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನರಿಗೂ ಓದಿ ಹೇಳಿದನು.


ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”


ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.


ನನಗೆ ಅವರು, “ಮನುಷ್ಯಪುತ್ರನೇ, ಹೋಗು; ಇಸ್ರಾಯೇಲಿನ ಜನರ ಬಳಿಗೆ ಹೋಗಿ, ನನ್ನ ಮಾತುಗಳನ್ನು ಅವರಿಗೆ ಹೇಳು.


ಸೆರೆಯಾಗಿರುವ ನಿನ್ನ ಜನರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರು ಕೇಳಿದರೂ ಕೇಳದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಅವರಿಗೆ ಹೇಳು,” ಎಂದನು.


ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆಯುವೆನು. ಆಗ ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ.’ ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಏಕೆಂದರೆ ಅವರು ತಿರುಗಿಬೀಳುವ ಜನರಾಗಿದ್ದಾರೆಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು