Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:5 - ಕನ್ನಡ ಸಮಕಾಲಿಕ ಅನುವಾದ

5 ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ದ್ರೋಹಿವಂಶದವರು, ಒಂದು ವೇಳೆ ಕೇಳದೆ ಹೋದಾರು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಕಾಣಿಸಿಕೊಂಡಿದ್ದಾನೆಂದು ತಿಳಿದೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:5
20 ತಿಳಿವುಗಳ ಹೋಲಿಕೆ  

“ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವುದು.”


ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆಯುವೆನು. ಆಗ ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ.’ ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಏಕೆಂದರೆ ಅವರು ತಿರುಗಿಬೀಳುವ ಜನರಾಗಿದ್ದಾರೆಂದು ಹೇಳಬೇಕು.


ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.


ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.


ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರ ಅಪನಂಬಿಕೆಯು ದೇವರ ಪ್ರಾಮಾಣಿಕತೆಯನ್ನು ರದ್ದುಗೊಳಿಸುವುದೇ?


ಆದರೆ ನೀನು ದುಷ್ಟನನ್ನು ಅವನ ದುರ್ಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತಿರುಗಿಕೊಳ್ಳದೆ ಹೋದರೆ ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ಆದರೆ ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ, ದುರ್ಮಾರ್ಗವನ್ನೂ ಬಿಟ್ಟು ತಿರುಗಿಕೊಳ್ಳದೆ ಹೋದರೆ, ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ಹೀಗೆ ಅರಸನು ಯೆಹೂದಿಯನ್ನು, ಆ ಸುರುಳಿಯನ್ನು ತೆಗೆದುಕೊಂಡು ಬರುವ ಹಾಗೆ ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು. ಯೆಹೂದಿಯು ಅದನ್ನು ಅರಸನಿಗೂ, ಅರಸನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನರಿಗೂ ಓದಿ ಹೇಳಿದನು.


“ಯೆಹೂದದ ಶೇಷವೇ, ಯೆಹೋವ ದೇವರು ನಿಮ್ಮ ವಿಷಯವಾಗಿ ಹೇಳಿದ್ದೇನೆಂದರೆ: ‘ಈಜಿಪ್ಟಿಗೆ ಹೋಗಬೇಡಿರಿ,’ ಇದನ್ನು ಖಚಿತಪಡಿಸಿಕೊಳ್ಳಿ: ನಾನು ಇಂದು ನಿಮಗೆ ಎಚ್ಚರಿಕೆ ನೀಡುತ್ತೇನೆ.


“ಮನುಷ್ಯಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೇ?


ತಿರುಗಿಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ.


ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.


ಇದಲ್ಲದೆ ನಾನು ನಿನ್ನ ನಾಲಿಗೆ ಸೇದಿ ಹೋಗುವಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವವನಾಗಲಾರೆ. ಅವರು ತಿರುಗಿಬೀಳುವ ಜನರಾಗಿದ್ದಾರೆ.


“ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.


ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು