ಯೆಹೆಜ್ಕೇಲನು 2:6 - ಕನ್ನಡ ಸಮಕಾಲಿಕ ಅನುವಾದ6 ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನರಪುತ್ರನೇ, ನೀನು ಮುಳ್ಳುಕೊಂಪೆಗಲಿಗೆ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿವಂಶದವರು; ಅವರ ಬಿರುನುಡಿಗೆ ದಿಗಿಲುಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು. ಅಧ್ಯಾಯವನ್ನು ನೋಡಿ |