Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:9 - ಕನ್ನಡ ಸಮಕಾಲಿಕ ಅನುವಾದ

9 ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು. ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಗೋ, ನಾನು ನೋಡುತ್ತಿರಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರುಳಿಯು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು; ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಹಾ, ನಾನು ನೋಡಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರಳಿಯು ಕಾಣಿಸಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ನಾನು ಒಂದು ಕೈ ನನ್ನ ಬಳಿಗೆ ಬರುವದನ್ನು ಕಂಡೆನು. ಆ ಕೈ ಒಂದು ಸುರುಳಿಯನ್ನು ಹಿಡುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:9
13 ತಿಳಿವುಗಳ ಹೋಲಿಕೆ  

ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಒಂದು ಕೈ ನನ್ನನ್ನು ಮುಟ್ಟಿ, ನನ್ನ ಮೊಣಕಾಲುಗಳೂ, ನನ್ನ ಅಂಗೈಗಳೂ ನಡುಗುವಂತೆ ಮಾಡಿತು.


ಇದಾದ ಮೇಲೆ ದೇವರು ನನಗೆ, “ಮನುಷ್ಯಪುತ್ರನೇ, ನಿನಗೆ ಸಿಕ್ಕಿದ್ದ ಈ ಸುರುಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಜನರ ಸಂಗಡ ಮಾತನಾಡು,” ಎಂದರು.


ಆಗ ನಾನು ಹೀಗೆಂದೆನು, ‘ಓ, ದೇವರೇ, ಪವಿತ್ರ ವೇದದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವಂತೆ ನಾನು ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ.’ ”


ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.


“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.


ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.


ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆದನು. ಬಾರೂಕನು ಯೆರೆಮೀಯನ ಬಾಯಿಂದ ಯೆಹೋವ ದೇವರು ಅವನಿಗೆ ಹೇಳಿದ್ದ ಮಾತುಗಳನ್ನೆಲ್ಲಾ ಕೇಳಿ, ಗ್ರಂಥದ ಸುರುಳಿಯನ್ನು ಬರೆದನು.


ಆಗ ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಲು, ಹಾರುವ ಸುರುಳಿ ಕಾಣಿಸಿತು.


ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು