ಯೆಹೆಜ್ಕೇಲನು 20:1 - ಕನ್ನಡ ಸಮಕಾಲಿಕ ಅನುವಾದ1 ಏಳನೆಯ ವರ್ಷದ, ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವ ದೇವರ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 [ಯೆಹೋಯಾಖೀನನು ಸೆರೆಯಾದ] ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆಕೇಳುವದಕ್ಕೆ ಬಂದು ನನ್ನ ಮುಂದೆ ಕೂತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮಾರ್ಗದರ್ಶನಕ್ಕಾಗಿ ಯೆಹೋವನನ್ನು ಕೇಳಲು ಒಂದು ದಿನ ಇಸ್ರೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದರು. ಅದು ಸೆರೆವಾಸದ ಏಳನೆ ವರ್ಷದ ಐದನೆ ತಿಂಗಳಿನ ಹತ್ತನೆಯ ದಿನ. ಹಿರಿಯರು ನನ್ನ ಎದುರಿನಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿ |
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.